ಹಾಸನ ಜಿಲ್ಲೆಯಲ್ಲಿ ದಳ ಪಕ್ಷದ ಮತ್ತೊಂದು ವಿಕೆಟ್ ಪತನವಾಗಿದೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಫೆ 5 ರಂದು ಕಾಂಗ್ರೆಸ್ ಸೇರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಇದ್ದ ಗೊಂದಲಕ್ಕೆ ತೆರೆ ಎಳೆದು ಮಾರ್ಚ್ 5 ರಂದು ಅರಸೀಕೆರೆ ತಾಲೂಕಿನ ಗುತ್ತಿನಗೆರೆ ಗ್ರಾಮದಲ್ಲಿ ಆಯೋಜನೆಗೊಂಡಿರುವ ಸಂಗೊಳ್ಳಿರಾಯಣ್ಣ ಪ್ರತಿಮೆ ಉದ್ಘಾಟನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಈ ವೇಳೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಳೆದ 1 ವರ್ಷದಿಂದ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು . ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.
ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಬಗ್ಗೆ ಪದೇ ಪದೇ ಸ್ಪಷ್ಟನೆ ನೀಡಿದ್ದ ಶಿವಲಿಂಗೇಗೌಡ, ಜೆಡಿಎಸ್ ನಾಯಕರೊಂದಿಗೆ ಭಿನ್ನಾಭಿಪ್ರಾಯ ಇರುವುದು ನಿಜ. ಆದರೆ ಅಂತಿಮವಾಗಿ ನಮ್ಮ ಕ್ಷೇತ್ರದ ಜನರು, ಬೆಂಬಲಿಗರು, ಅಭಿಮಾನಿಗಳ ಸಭೆ ಕರೆದು ತೀರ್ಮಾನ ಮಾಡುತ್ತೇನೆ. ಅವರು ಏನು ಹೇಳುತ್ತಾರೆ ಅದೇ ಅಂತಿಮ ಎಂದಿದ್ದರು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಬುದ್ಧಿಮಾಂದ್ಯ ಬಾಲಕಿಗೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ – ಆರೋಪಿ ಪರಾರಿ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್