December 24, 2024

Newsnap Kannada

The World at your finger tips!

arnab

Image source : Google / Picture by : twitter.com

ಅರ್ನಬ್‌ ಗೋಸ್ವಾಮಿಗೆ ಸುಪ್ರೀಂ ಜಾಮೀನು – ಬಂಧ ಮುಕ್ತ

Spread the love

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅರ್ನಾಬ್ ಬಂಧ ಮುಕ್ತ ರಾಗಿದ್ದಾರೆ.

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದೆ.

ಮೇ 2018 ರಲ್ಲಿ ಅಲಿಬಾಗ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್‌  ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂದು ಆರೋಪಿಸಿ ಮಹಾರಾಷ್ಟ್ರ ಪೊಲೀಸರು ಅರ್ನಬ್  ಅವರನ್ನು ಬಂಧಿಸಿದ್ದರು.

ನಾವು ರಿಪಬ್ಲಿಕ್ ಟಿವಿಯನ್ನು ನೋಡುವುದಿಲ್ಲ, ಆದರೆ ಈ ಪ್ರಕರಣದಲ್ಲಿ ಸಾಂವಿಧಾನಿಕ ಕೋರ್ಟ್ ಮಧ್ಯೆ ಪ್ರವೇಶಿಸುವ ಅಗತ್ಯವಿದೆ. ರಾಜ್ಯ ಸರ್ಕಾರಗಳು ಜನರ ವ್ಯಕ್ತಿಗತ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದರೆ ಜನರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇರುತ್ತದೆ  ಎಂದು ಕೋರ್ಟ್‌ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿತ್ತು.

ಅರ್ನಬ್ ಗೋಸ್ವಾಮಿಯವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!