ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸಂಪಾದಕ ಅರ್ನಾಬ್ ಗೋಸ್ವಾಮಿ ತಲೋಜಾ ಜೈಲಿಗೆ ಶಿಪ್ಟ್ ಮಾಡಲಾಗಿದೆ.
ಅರ್ನಾಬ್ ಮಧ್ಯಂತರ ಜಾಮೀನು ಅರ್ಜಿ ತೀರ್ಪನ್ನು ಬಾಂಬೆ ಹೈಕೋರ್ಟ್ ಕಾಯ್ದಿರಿಸಿದೆ.ತೀರ್ಪು ಹೊರ ಬರುವ ತನಕ ಅರ್ನಾಬ್ ಗೆ ಇನ್ನಷ್ಟು ದಿನಗಳ ಕಾಲ ಜೈಲುವಾಸವೇ ಗತಿಯಾಗಿದೆ.
ಈ ಹಿನ್ನೆಲೆಯಲ್ಲಿ ಅರ್ನಾಬ್ ರನ್ನು
ನವಿ ಮುಂಬೈ ಬಳಿ ಇರುವ ತಲೋಜಾ ಜೈಲಿಗೆ ಕರೆದೊಯ್ಯಲಾಗಿದೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಕೊರೊನಾ ಕಾರಣದಿಂದಾಗಿ ಅಲಿಭಾಗ್ ನಲ್ಲಿರುವ ಶಾಲೆಯನ್ನು ತಾತ್ಕಾಲಿಕ ಜೈಲನ್ನಾಗಿ ಮಾಡಿ, ಅರ್ನಾಬ್ ಅವರನ್ನು ಅಲ್ಲಿಯೇ ಇರಿಸಲಾಗಿತ್ತು.
ಈಗ ಅರ್ನಾಬ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಬಾಂಬೆ ಹೈಕೋರ್ಟ್, ಸೋಮವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ ಅರ್ನಾಬ್ ಅವರನ್ನು ಅಲಿಭಾಗ್ ನಿಂದ ತಲೋಜಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ