ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರವು ನಗದು ರಹಿತ ವೈದ್ಯಕೀಯ ಚಿಕಿತ್ಸೆಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ತರೀಕೆರೆ ಶಾಸಕ ಶ್ರೀನಿವಾಸ ಜಿ.ಹೆಚ್. ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನಲ್ಲಿ ಪ್ರತ್ಯೇಕ ಕೋಶವನ್ನು (KASS CELL) ಸೃಷ್ಟಿಸಿ, ಅವಶ್ಯಕ ಮೂಲ ಸೌಲಭ್ಯಗಳ ಪೂರೈಕೆ ಮತ್ತು ತಂತ್ರಾಂಶ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಮಾದರಿಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.
ಎಲ್ಲಾ ಸಿಬ್ಬಂದಿಗಳ ಮಾಹಿತಿಯನ್ನು ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ಸಿಸ್ಟಂ (HRMS) ದತ್ತಾಂಶದಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.
DDO User Manual ಮತ್ತು Mobile User Manual ಅನ್ನು ಎಲ್ಲ DDO ಗಳಿಗೆ HRMS ತಂತ್ರಾಂಶದಲ್ಲಿ ಲಭ್ಯಪಡಿಸಲಾಗಿದೆ.
ಈ ಯೋಜನೆ ಅನುಷ್ಠಾನಗೊಳ್ಳಲು ಸರಿಯಾದ ತಂತ್ರಾಂಶದ ಅಭಿವೃದ್ಧಿ ಪ್ರಕ್ರಿಯೆ SAST ಹಂತದಲ್ಲಿ ಪರಿಶೀಲನೆಯಲ್ಲಿದೆ.
ಯೋಜನೆಯ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳ ನೋಂದಣಿ:
2023ರ ಮಾರ್ಚ್ 9ರ ಸರ್ಕಾರದ ಆದೇಶ ಸಂಖ್ಯೆ: C.A.S.U.E 16 AMR 2020 (ಭಾಗ-5)
ಈ ಆದೇಶದಡಿಯಲ್ಲಿ, ಈಗಾಗಲೇ ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ SAST ನ ವಿವಿಧ ಯೋಜನೆಗಳ ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳ KASS ಯೋಜನೆಯಡಿ ಭಾವಿತ ನೋಂದಾವಣೆ (Deemed Empanelment) ಆಗಲಿದೆ.
ಹೊಸ ಖಾಸಗಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಸರ್ಕಾರಿ ನೌಕರರಿಗೆ ಆರೋಗ್ಯ ಸೇವೆ:
ಪ್ರಸ್ತುತ ಕರ್ನಾಟಕ ಸರ್ಕಾರಿ ನೌಕರರ ವೈದ್ಯಕೀಯ ಹಾಜರಾತಿ ನಿಯಮಗಳು, 1963 ಅಡಿಯಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯವಿದೆ.
ಜ್ಯೋತಿ ಸಂಜೀವಿನಿ ಯೋಜನೆ ಅಡಿಯಲ್ಲಿ ಈಗಾಗಲೇ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ