ಮೈಸೂರು : ನಮ್ಮ ಮನೆಯಲ್ಲಿ ತಂಗಿ, ವಯಸ್ಸಾದ ತಾಯಿ ಇದ್ದಾರೆ . ಅವರನ್ನೂ ಬಂಧಿಸಿ ಬಿಡಿ. ನಿಮ್ಮ ಮಗನನ್ನು ಎಂಪಿ ಮಾಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಕೊನೆಗೆ ನನ್ನ ಜೀವನ ತೆಗೆಯಬಹುದು ಅಷ್ಟೇ ಎಂದು ಸಂಸದ ಪ್ರತಾಪ್ ಸಿಂಹ ಭಾನುವಾರ ಸಿಎಂ ಸಿದ್ದುಗೆ ಟಾಂಗ್ ನೀಡಿದರು .
ಮರಗಳ್ಳತನ ಪ್ರಕರಣದಲ್ಲಿ ಸಹೋದರ ವಿಕ್ರಂ ಸಿಂಹ ಬಂಧನಕ್ಕೆ ಪ್ರತಿಕ್ರಿಯೆ ನೀಡಿ ಮೈಸೂರಿನಲ್ಲಿ ಮಾತನಾಡುವಾಗ ಸಂಸದರು ಭಾವುಕರಾಗಿ,ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ .
ಸಿದ್ದರಾಮಯ್ಯ ಸರ್ ಬ್ರಿಲಿಯಂಟ್ ಫಾದರ್, ಬ್ರಿಲಿಯಂಟ್ ಪೊಲಿಟಿಷಿಯನ್. ನಿಮ್ಮ ಮಗನನ್ನು ಎಂಪಿ ಮಾಡಿಕೊಳ್ಳುವ ಸಲುವಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ. ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ನನ್ನ ತಮ್ಮನನ್ನು ಅರೆಸ್ಟ್ ಮಾಡಿಸಿದ್ದೀರಿ ಎಂದು ಟೀಕಿಸಿದ್ದಾರೆ.
ಮನೆಯಲ್ಲಿ ವಯೋವೃದ್ಧ ತಾಯಿ ಇದ್ದಾರೆ. ನನ್ನ ತಂಗಿ ಇದ್ದಾಳೆ, ಅವರನ್ನು ಅರೆಸ್ಟ್ ಮಾಡಿಬಿಡಿ. ನನ್ನ ತೇಜೋವಧೆ ಮಾಡಿದ್ದಾಯಿತು. ಈಗ ನನ್ನ ಕುಟುಂಬವನ್ನು ಮುಗಿಸಲು ಪ್ರಯತ್ನ ಮಾಡುತ್ತಿದ್ದೀರಿ ಎಂದು ನೊಂದು ನುಡಿದಿದ್ದಾರೆ.ಮಾಡ್ರನ್ ಡ್ರೆಸ್ ಹಾಕುತ್ತಿದ್ದ ಪತ್ನಿಯನ್ನೇ ಕೊಂದ ಪತಿ
ಸಿದ್ದರಾಮಯ್ಯ ಅವರನ್ನ ನಾನು ಶ್ಲಾಘನೆ ಮಾಡಬೇಕು ಅಂದುಕೊಂಡಿದ್ದೇನೆ. ತನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಯಾರನ್ನು ಬೇಕಾದರೂ ತುಳಿಯುತ್ತಾರೆ. ಇದನ್ನು ಸಿದ್ದರಾಮಯ್ಯ ಅವರಿಂದ ಕಲಿಯಬೇಕು. ಇಂತಹ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ ನಿಮ್ಮನ್ನು ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಟಾಂಗ್ ಕೊಟ್ಟಿದ್ದಾರೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )