ಮಂಡ್ಯ : ಮಂಡ್ಯದಲ್ಲಿ ರೈತರು , ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಬಿಟ್ಟ ಕಾರಣಕ್ಕೆ ಕಪು ಬಾವುಟ ಪ್ರದರ್ಶಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತಿದ್ದ ವೇಳೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕಾವೇರಿ ಹೋರಾಟಗಾರರನ್ನು ಬಂಧಿಸಲಾಗಿದೆ.
ರೈತ ನಾಯಕಿ ಸುನಂದಾ ಜಯರಾಂ,ಮಾಜಿ ಪರಿಷತ್ ಸದಸ್ಯ, ಕೆ.ಟಿ.ಶ್ರೀಕಂಠೇಗೌಡ,ಕನ್ನಡ ಸೇನೆ ಮಂಜು ಸೇರಿದಂತೆ ಹಲವು ರೈತ ಸಂಘದ ಕಾರ್ಯಕರ್ತರ ಬಂಧನವಾಗಿದ್ದು ,ಬಂಧನದ ವೇಳೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಸಂಕಷ್ಟದಲ್ಲಿಯೂ ನದಿಗೆ ನೀರು ಹರಿಸಲಾಗ್ತಿದೆ ಎಂದು ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳಿಂದ ಹೋರಾಟ ನಡೆಸಲಾಗುತ್ತಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರು ಹಳೆ ಬೆ-ಮೈ ಹೆದ್ದಾರಿ ತಡೆದು ಮಂಡ್ಯ ಜಿಲ್ಲೆಯ ಜನ ಜಾನುವಾರುಗಳಿಗೆ ಅನ್ಯಾಯವಾಗಿದೆ. ನಮ್ಮ ನೀರು ರಕ್ಷಸೋಣ ಎಂಬ ಸ್ಲೋಗನ್ ಹಿಡಿದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ಪಡಿಸಿದ್ದು, ರಸ್ತೆ ತಡೆಯಿಂದ ಹಳೆ ಬೆಂ-ಮೈ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.5.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ಹೋರಾಟಗಾರರು ಕಪ್ಪು ಬಾವುಟ ಪ್ರದರ್ಶನ ಮೂಲಕ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು , ಹೋರಾಟ ಗಾರರನ್ನು ಬಂಧಿಸಿ ಬಸ್ಸಿನಲ್ಲಿ ಪೊಲೀಸರು ಕರೆದೋಯ್ದಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ