ಗೂಂಡಾ ಕಾಯ್ದೆ ಅಡಿ ಕೆರೆಹಳ್ಳಿ ಪುನೀತ್ ಬಂಧನ

Team Newsnap
1 Min Read

ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ಬಂಧಿಸಿದ್ದಾರೆ

ಹಿಂದುತ್ವ ಹಾಗೂ ಗೋರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಶುಕ್ರವಾರ ತಡರಾತ್ರಿಯೇ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ಬೆಂಗಳೂರಿನ ಜೆ.ಪಿ.ನಗರ 7ನೇ ಹಂತದಲ್ಲಿ ವಾಸ್ತವ್ಯವಿದ್ದ. ಈತ ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ ಎಂದು ಆರೋಪಿಸಲಾಗಿದೆ. IRSO ಗಗನಯಾನಕ್ಕೆ ಮತ್ತೊಂದು ಮಹತ್ವ ಪರೀಕ್ಷೆ ಯಶಸ್ವಿ

ಇದ್ರೀಸ್ ಪಾಷಾ ಕೊಲೆ ಆರೋಪಿಯೂ ಆಗಿದ್ದ. ಎಲ್ಲಾಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ಆತನನ್ನು ವಶಕ್ಕೆ ಪಡೆಯಲಾಗಿದೆ

ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share This Article
Leave a comment