ಫೋಕ್ಸೋ ಕಾಯ್ದೆಅಡಿ ಮುರುಘಾ ಶ್ರೀಗಳ ಬಂಧನ : ಅಜ್ಞಾತ ಸ್ಥಳದಲ್ಲಿ ವಿಚಾರಣೆ ಸಾಧ್ಯತೆ

Team Newsnap
1 Min Read

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲೇ ಮುರುಘಾ ಶ್ರೀ ಗಳನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಬಂಧನದ ನಂತರ ವೈದ್ಯಕೀಯ ಪರೀಕ್ಷೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಮುರುಘಾಶ್ರೀ ಗಳನ್ನು ಪೋಲಿಸರು ಕರೆದುಕೊಂಡು ಹೋಗಿದ್ದಾರೆ. ಶ್ರೀಗಳಿಗೆ ಉಸಿರಾಟದ ತೊಂದರೆ ಇದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ

ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣ ಮಾಡಿದರು

ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್ ಜಾರಿ ಮಾಡಿದ್ದರ ಹಿನ್ನೆಲೆಯಲ್ಲಿ ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನೆಲೆಯಲ್ಲಿ ಮುರುಘಾ ಶ್ರೀಯನ್ನು ಬಂಧಿಸಲಾಗಿದೆ. ಈಗ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಇದನ್ನು ಓದಿ – ರೇಪ್‌ ಕೇಸ್‌ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿಗೆ ಜಾಮೀನು

ಮುರುಘಾಶ್ರೀ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ, ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಮೊದಲ ಆರೋಪಿ ಮುರುಘಾ ಶ್ರೀ ಹಾಗೂ ವಾರ್ಡನ್ ರಶ್ಮಿಯನ್ನು ಬಂಧಿಸಲಾಗಿದೆ ಮೂರನೆ ಆರೋಪಿ ಮಠದ ಉತ್ತರಾಧಿಕಾರಿ (ಬಸವಾದಿತ್ಯ) , A-4 ಮಠದ ಕಾರ್ಯದರ್ಶಿ ಪರಮಶಿವಯ್ಯ, A-5 ವಕೀಲ ಗಂಗಾಧರಯ್ಯ ನಾಪತ್ತೆಯಾಗಿದ್ದಾರೆ

ಮುರುಘಾಮಠದಲ್ಲೇ ವಾಸ್ತವ್ಯ ಹೂಡಿದ್ದ A-1 ಮುರುಘಾ ಶ್ರೀ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. A- 2 ಲೇಡಿ ವಾರ್ಡನ್ ಪೊಲೀಸರ ವಶದಲ್ಲಿದ್ದಾರೆ ,ಪ್ರಸ್ತುತ ಸಾಂತ್ವನ ಕೇಂದ್ರದಲ್ಲಿದ್ದಾರೆ.

Share This Article
Leave a comment