December 22, 2024

Newsnap Kannada

The World at your finger tips!

prajwal revanna today

ಪ್ರಜ್ವಲ್ ರೇವಣ್ಣ ಬಂಧನ : ವೈದ್ಯಕೀಯ ತಪಾಸಣೆ ನಂತರ ಕೋರ್ಟ್ ಗೆ ಹಾಜರು

Spread the love

ಬೆಂಗಳೂರು : ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ತಡ ರಾತ್ರಿ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ ಕೂಡಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು.

ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು.

ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆ ತಂದರು

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ತಮ್ಮ ವಶಕ್ಕೆ ಕೇಳಲಿದ್ದಾರೆ. ಸದ್ಯ ಎಸ್ಐಟಿ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಜ್ವಲ್ ರೇವಣ್ಣ ಬಂಧನ : ವೈದ್ಯಕೀಯ ತಪಾಸಣೆ ನಂತರ ಕೋರ್ಟ್ ಗೆ ಹಾಜರು

ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ

Copyright © All rights reserved Newsnap | Newsever by AF themes.
error: Content is protected !!