ಮಂಗಳೂರಿನ ಸುರತ್ಕಲ್‍ನಲ್ಲಿ ನೈತಿಕ ಪೊಲೀಸ್‍ಗಿರಿ ನಡೆಸಿದ 6 ಮಂದಿಯನ್ನು ಸುರತ್ಕಲ್ ಪೋಲಿಸರು ಕಳೆದ ರಾತ್ರಿ ಬಂಧಿಸಿದ್ದಾರೆ.
ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ ಪ್ರಹ್ಲಾದ್, ಪ್ರಶಾಂತ್, ಗುರು ಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಬಂಧಿತ ಆರೋಪಿಗಳು.
ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಒಟ್ಟು 6 ಜನ ಅರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ.
ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಬೆನ್ನಲ್ಲೆ ಆರೋಪಿಗಳನ್ನು ಬಂಧಿಸಿದ್ದಾರೆ .
ಕೇರಳ ಮೂಲದ ಅನ್ಯ ಧರ್ಮದ ಯುವಕ ಹಾಗೂ ಯುವತಿ ಬೈಕಿನಲ್ಲಿ ಹೋಗುತ್ತಿದ್ದಾಗ ಯುವಕರ ತಂಡವೊಂದು ಫಾಲೋ ಮಾಡಿದೆ. ಅಂತೆಯೇ ಜೋಡಿ ಸುರತ್ಕಲ್ ನ ಕಲ್ಯಾಣಿ ಸಿಟಿ ಪರ್ಲ್ ಅಪಾರ್ಟ್ಮೆಂಟ್ ಬಳಿ ಬರುತ್ತಿದ್ದಂತೆಯೇ ತಂಡ ಯುವಕನಿಗೆ ಥಳಿಸಿದೆ. ಇತ್ತ ಅನ್ಯಧರ್ಮಿಯ ಯುವಕನ ಜೊತೆ ಓಡಾಡುತ್ತೀಯ ಅಂತಾ ಯುವತಿಗೂ ಧಮ್ಕಿ ಹಾಕಲಾಗಿದೆ.
ಯುವತಿ ವಾಸವಿದ್ದ ಅಪಾರ್ಟ್ಮೆಂಟ್ ಖಾಲಿ ಮಾಡಿ ಮತ್ತೊಂದು ಅಪಾರ್ಟ್ ಮೆಂಟ್ ಗೆ ಶಿಫ್ಟಿಂಗ್ ಮಾಡಲಾಗುತ್ತಿತ್ತು. ಶಿಫ್ಟಿಂಗ್ ಗೆ ಸಹಾಯ ಮಾಡಿ ಯುವಕ ತನ್ನ ಬೈಕಿನಲ್ಲಿ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ. ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಸ್ನೇಹಿತೆಗೆ ಯುವಕ ಸಹಾಯ ಮಾಡಿದ್ದಾನೆ. ಈ ವೇಳೆ ಯುವಕರ ತಂಡ ಫಾಲೋ ಮಾಡಿ ಥಳಿಸಿದೆ. ಸುರತ್ಕಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ