crime

ಇಬ್ಬರು ವಿದೇಶಿಯರು ಸೇರಿ ಮೂರು ಡ್ರಗ್‌ ಪೆಡ್ಲರ್‌ಗಳ ಬಂಧನ

ಬೆಂಗಳೂರಿನಲ್ಲಿ ಡ್ರಗ್‌ಪೆಡ್ಲರ್‌ಗಳ ಹೆಡೆಮುರಿಕಟ್ಟುವ ಕಾರ್ಯ ಮುಂದುವರೆದಿದ್ದು, ಸಿಸಿಬಿ ಮತ್ತು ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಇಬ್ಬರು ವಿದೇಶಿಯರು ಸೇರಿ ಮೂವರನ್ನು ಬಂಧಿಸಿದೆ.


ರಾಜಧಾನಿಯ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂಡಿಎಂಎ ಎಕ್ಸ್ಟಸಿ ಪಿಲ್ಸ್ಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾದ ಇಬ್ಬರು ಮತ್ತು ಕೇರಳ ಮೂಲದ ಒಬ್ಬನನ್ನು ಸೋಮವಾರ ಬಂಧಿಸಿದ್ದಾರೆ. ಅವರ ಬಳಿಯಿದ್ದ 210 ಗ್ರಾಂ ತೂಕದ 500 ಎಕ್ಸ್ಟಸಿ ಮಾತ್ರೆಗಳು, ಆರು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ 30 ಲಕ್ಷರೂ.ಗಳೆಂದು ಪ್ರಕಟಣೆ ತಿಳಿಸಿದೆ.


ಸದರಿ ಮಾದಕ ವಸ್ತುಗಳನ್ನು ಕಾಲೇಜು ವಿದ್ಯಾರ್ಥಿಗಳು, ಐಟಿ,ಬಿಟಿ ಕಂಪನಿಯ ಉದ್ಯೋಗಿಗಳಿಗೆ ಸರಬರಾಜು ಮಾಡಿ ಹೆಚ್ಚಿನ ಹಣ ಗಳಿಸುವ ದಂಧೆಯಲ್ಲಿ ತೊಡಗಿದ್ದರು. ಬಂಧಿತ ಮೂವರ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ1985 ರ ರೀತ್ಯ ಪ್ರಕರಣ ದಾಖಲಾಗಿದೆ.


ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಕೆ.ಸಿ.ಗೌತಮ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆರ್. ದೀಪಕ್, ಸಿಬ್ಬಂದಿಗಳಾದ ವಿನಯ್, ಶಹನೂರು ರಣಮಲ್ಲೇ, ಶಿವಪ್ಪಕುಡಚಿ, ದ್ಯಾವರಸಯ್ಯ, ರಘು ಮತ್ತು ಆನಂದ ಅವರಿದ್ದ ತಂಡ ಕಾರ್ಯಾಚರಣೆ ನಡೆಯಿತು.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024