ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಕೊಲೆ ಆರೋಪಿಗಳ ಬಂಧಿಸಲಾಗಿದೆ.
ಕಳೆದ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು.
ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಸವಣೂರು ಮೂಲದ ಝಕೀರ್ (29) ಮತ್ತು ಶಫೀಕ್ (27) ಬೆಳ್ಳಾರೆ ಬಂಧಿತ ಆರೋಪಿಗಳು.
ಝಾಕೀರ್ ಸವಣೂರು ಎಸ್‌ಡಿಪಿಐ ಗ್ರಾಮ ಸಮಿತಿ ಮುಖಂಡ, ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಚನ್ನಪಟ್ಟಣದಲ್ಲಿ ಬಾಲಕ ಸಾವು : ಬೈಕ್ ಕೊಟ್ಟ ಮಾಲೀಕನಿಗೆ 34 ಸಾವಿರ ದಂಡ, 1 ದಿನ ಜೈಲು
ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್‍ಪಿ ಹೃಷಿಕೇಶ್ ಸೋನಾವಣೆ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೆಟ್ಟಾರುಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳಿ, ಅಲ್ಲಿಂದ ಪ್ರವೀಣ್ ಹುಟ್ಟೂರು ನೆಟ್ಟಾರುಗೆ ಹೋಗಲಿದ್ದಾರೆ. ಅಲ್ಲಿ ಪ್ರವೀಣ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಿಎಂ ಸಾಂತ್ವನ ಹೇಳಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು