ಹೈಕೋರ್ಟ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ – 14 ದಿನಗಳ ಕಾಲ ಜೈಲು

Team Newsnap
1 Min Read
shock for Congress: High Court order to cancel ACB - Lokyukta gets power again

ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯ . ಮಧುರೈ ಪೊಲೀಸರು ಶನಿವಾರ ರಾತ್ರಿ ಆರೋಪಿಯನ್ನು ತಿರುನಲ್ವೇಲಿಯಲ್ಲಿ ಬಂಧಿಸಿದ್ದರು.

ಆರೋಪಿಗೆ ಮಾರ್ಚ್ 31ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಆತನನ್ನು ತಿರುಪತ್ತೂರ್ ಜೈಲಿನಲ್ಲಿರಿಸಲಾಗಿದೆ.

ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿತ್ತು.

ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಮಧುರೈ ಪೊಲೀಸರೂ ಪ್ರಕರಣ ದಾಖಲಿಸಿಕೊಂಡಿದ್ದರು. ನ್ಯಾಯಾಧೀಶರಿಗೆ ಕೊಲೆ
ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು.

ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್‍ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‍ಗಳಲ್ಲಿ ಎಫ್‍ಐಆರ್ ದಾಖಲಾಗಿದೆ.

Share This Article
Leave a comment