December 22, 2024

Newsnap Kannada

The World at your finger tips!

WhatsApp Image 2023 08 04 at 2.05.16 PM

ಮೈಸೂರು ಜಿಲ್ಲೆಗೆ ರಾಷ್ಟ್ರಪತಿಗಳ ಆಗಮನ – ಡಿಸಿ ಡಾ. ಕೆ ವಿ ರಾಜೇಂದ್ರ

Spread the love

ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮ್ ಆಗಸ್ಟ್ 5 ರಂದು ಮಧ್ಯಾಹ್ನ 12.30 ಗಂಟೆಗೆ ಆಗಮಿಸಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಮಧುಮಲೈಗೆ ನಿರ್ಗಮಿಸುವರು.

ನಂತರ ಸಂಜೆ 5.45 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸುವರು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಶುಕ್ರವಾರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾನಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು.

ರಾಷ್ಟ್ರಪತಿ ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನನುಕೂಲ ಆಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು, ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರೂಮ್ ಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡಬೇಕೆಂದರು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.ನವೆಂಬರ್‌ 2 ರಿಂದ 15ರವರೆಗೆ ಹಾಸನಾಂಬೆಯ ದರ್ಶನ

ಆಹಾರ ಸುರಕ್ಷ ತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!