‘ಕೃತಕ ಬುದ್ಧಿಮತ್ತೆ'(Artificial Intelligence) ಕುರಿತ ‘ರೈಸ್ ೨೦೨೦’ ಜಾಗತಿಕ ವರ್ಚುಯಲ್ ಶೃಂಗಸಭೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕ್ಟೋಬರ್ 5 ರಂದು ಉದ್ಘಾಟಿಸಲಿದ್ದಾರೆ.
ರೆಸ್ಪಾನ್ಸಿಬಲ್ ಎ ಐ ಫಾರ್ ಸೋಷಿಯಲ್ ಎಂಪವರ್ಮೆಂಟ್ ೨೦ ೨೦ ಶೃಂಗ ಸಮಾವೇಶವನ್ನು ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ನೀತಿ ಆಯೋಗ ಜಂಟಿಯಾಗಿ ಆಯೋಜಿಸಿವೆ.
ಅಕ್ಟೋಬರ್ ೫ರಿಂದ ೯ರ ತನಕ ಐದು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಖಾತೆ ಸಚಿವ ರವಿಶಂಕರ್ ಪ್ರಸಾದ್ ಮತ್ತಿತರರು ಭಾಗವಹಿಸಲಿದ್ದಾರೆ.
ಜಗತ್ಪ್ರಸಿದ್ಧ ಕೃತಕ ಬುದ್ಧಿಮತ್ತೆ ತಜ್ಞ ಪ್ರೊಫೆಸರ್ ರಾಜ್ ರೆಡ್ಡಿ, ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷ ಮುಖಶ್ ಅಂಬಾನಿ, ಐಬಿಎಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಕೃಷ್ಣ ಮತ್ತಿತರು ಪಾಲ್ಗೊಳ್ಳಲಿದ್ದಾರೆ.
ಒಂದು ಶತಕೋಟಿಗೂ ಅಧಿಕ ಸಂಖ್ಯೆಯಲ್ಲಿ ಭಾರತೀಯರನ್ನು ಕೃತಕ ಬುದ್ಧಿಮತ್ತೆ ವಿಚಾರದಲ್ಲಿ ತರಬೇತಿ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಕುರಿತಂತೆ ಈ ಸಂದರ್ಭದಲ್ಲಿ ನಡೆಯಲಿದೆ.
ಜಗತ್ತಿನ ವಿವಿಧ ದೇಶಗಳ ೧೫ ಸಾವಿರಕ್ಕೂ ಹೆಚ್ಚು ಶಿಕ್ಷಣ ತಜ್ಞರು, ಸಂಶೋಧನ ಉದ್ಯಮ ಹಾಗೂ ಸರ್ಕಾರದ ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಮಾಹಿತಿ ತಂತ್ರಜ್ಞಾನ ಇಲಾಖೆ ತಿಳಿಸಿದೆ.
೨೦೩೫ರ ವೇಳೆಗೆ ಭಾರತದ ಆರ್ಥಿಕತೆಗೆ ೯೫೭ ಶತಕೋಟಿ ಅಮೆರಿಕನ್ ಡಾಲರ್ ನಷ್ಟು ಆದಾಯ ಹೆಚ್ಚಾಗುವ ನಿಟ್ಟಿನಲ್ಲಿ ಈ ಸಮಾವೇಶ ಸಹಕಾರಿಯಾಗಲಿದೆ ಎಂದು ಉದ್ಯಮದ ವಿಶ್ಲೇಷಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ