ಚಾಮುಂಡಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಕಾರ್ಯಕ್ರಮ : ಸಿದ್ದತೆಗೆ ಕ್ರಮ ಜಿಲ್ಲಾ ಮಂತ್ರಿ ಸೂಚನೆ

Team Newsnap
1 Min Read
Ashada Friday program in Chamundibetta: District Minister instructed to take steps to be ready ಚಾಮುಂಡಿಬೆಟ್ಟದಲ್ಲಿ ಆಷಾಡ ಶುಕ್ರವಾರ ಕಾರ್ಯಕ್ರಮ : ಸಿದ್ದತೆಗೆ ಕ್ರಮ ಜಿಲ್ಲಾ ಮಂತ್ರಿ ಸೂಚನೆ

ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸಲು ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು.

ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.

ಚಾಮುಂಡಿ ಬೆಟ್ಟ ಚಾಮುಂಡೇಶ್ವರಿ ದೇವಸ್ಧಾನದಲ್ಲಿ 2023 ನೇ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಅಂಗವಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಈ ಹಿಂದೆ ನಡೆದಿರುವ ಕ್ರಮಗಳನ್ನು ಅನುಸರಿ, ಯಾವುದು ಲೋಪವಿರುವ ವ್ಯವಸ್ಥೆಗಳನ್ನು ಸರಿ ಪಡಿಸಿ ಜನರಿಗೆ ಅನುಕೂಲ ವಾಗುವ ಎಲ್ಲಾ ವ್ಯವಸ್ಥೆಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜೂ. 15ಕ್ಕೆ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ

ಈ ವೇಳೆ ಸಭೆಯಲ್ಲಿ ಎನ್.ಆರ್ ಕ್ಷೇತದ ಶಾಸಕರಾದ ತನ್ವಿರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್, ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share This Article
Leave a comment