ಮಾಜಿ ಸಚಿವ ದಿ. ಎಸ್ ಡಿ ಜಯರಾಂ ಪುತ್ರ ಅಶೋಕ್ ಜಯರಾಂ ಜೆಡಿಎಸ್ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆ ಯಾಗಲು ತುದಿಗಾಲಿನಲ್ಲಿ ನಿಂತಿದ್ದಾರೆಂದು ಗೊತ್ತಾಗಿದೆ.

ಮೂಲಗಳ ಪ್ರಕಾರ ಅಶೋಕ್ ಜಯರಾಂ ಈಗಾಗಲೇ ಬಿಜೆಪಿ ಅಂಗಳದಲ್ಲಿ ಹಲವಾರು ಬಾರಿ ಕಾಣಿಸಿಕೊಂಡಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ.

ಇದಕ್ಕೆ ಸಾಕ್ಚಿ ಎಂಬಂತೆ ಭಾನುವಾರ ಮಂಡ್ಯ ಎಸಿ ಮಾದೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅಶೋಕ್ ಜಯರಾಂ , ಬಿಜೆಪಿ ಜಿಲ್ಲಾ ಉಸ್ತುವಾರಿ , ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಇತರ ಜಿಲ್ಲಾ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡು ಸಭೆಯಲ್ಲಿ ಭಾಗವಹಿಸಿದ್ದು ಬಿಜೆಪಿ ಸೇರ್ಪಡೆಯನ್ನು ಖಚಿತಪಡಿಸುತ್ತಿದೆ.
ಈ ನಡುವೆ ಬಿಜೆಪಿಗೆ ಜಿಲ್ಲೆಯ ಬಹುತೇಕ ಕಾಂಗ್ರೆಸ್ , ಜೆಡಿಎಸ್ ನ ಬಹುತೇಕ ನಾಯಕರು ಸೇರ್ಪಡೆಯಾಗಲು ಸಿದ್ದರಾಗಿದ್ದಾರೆ. ಅಶೋಕ್ ಜಯರಾಂ ಬಿಜೆಪಿ ಸೇರ್ಪಡೆ ಸೇರುವ ಸಂಬಂಧ ಬಿರುಸಿನ ಮಾತುಕತೆಗಳು ಆರಂಭವಾಗಿವೆ. ಸಧ್ಯದಲ್ಲೇ ಸೇರ್ಪಡೆ ದಿನಾಂಕ ಕೂಡ ನಿರ್ಧಾರವಾಗಲಿದೆ ಎಂದು ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು