ರಾಜ್ಯದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರಿಗೂ ಕರೋನಾ ಸೋಂಕು ಧೃಡಪಟ್ಟಿದೆ. ಅವರೀಗ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಡಿಸಿಎಂ, ‘ಸೋಮವಾರ ವಿಧಾನಮಂಡಲ ಅಧಿವೇಶನ ಇದ್ದ ಕಾರಣ, ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ಸೋಂಕು ಧೃಡವಾಗಿದೆ. ಆದರೆ ನನಗೆ ರೋಗದ ಲಕ್ಷಣಗಳೇನೂ ಕಾಣಿಸಿಕೊಂಡಿಲ್ಲ. ನಾನು ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚಿಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕೋರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು