ಬೆಳಗಾವಿ: ಇತ್ತೀಚೆಗೆ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಸಿಬ್ಬಂದಿಯೊಬ್ಬರ ಆತ್ಮಹತ್ಯೆ ರಾಜ್ಯಾದಂತು ಭಾರಿ ಚರ್ಚೆಗೆ ಕಾರಣವಾಗಿತ್ತು. ಇಂಥದ್ದೇ ಮತ್ತೊಂದು ದುರಂತ ಇದೀಗ ಬೆಳಕಿಗೆ ಬಂದಿದೆ, ಬೆಳಗಾವಿಯ ಐಗಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್‌ಐ ಶಂಭು ಮೇತ್ರಿ (52) ಶನಿವಾರ ತಮ್ಮ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಭು ಮೇತ್ರಿ ಬೆಳಗಾವಿ ಜಿಲ್ಲೆಯ ಅನಂತಪುರ ಗ್ರಾಮದಲ್ಲಿರುವ ತಮ್ಮ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾರೆ. ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳೀಯ ಅಥಣಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತದ ಕುರಿತು ಪ್ರಾಥಮಿಕ ತನಿಖೆ ಆರಂಭಿಸಲಾಗಿದ್ದು, ಶಂಭು ಮೇತ್ರಿ ಅವರ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.ಇದನ್ನು ಓದಿ –ಸುಬ್ರಹ್ಮಣ್ಯ ಷಷ್ಠಿ
ಈ ದುರಂತದ ಬೆಳವಣಿಗೆಯು ಇನ್ನಷ್ಟು ಪ್ರಶ್ನೆಗಳನ್ನು ಎಬ್ಬಿಸಿದ್ದು, ಶಂಭು ಮೇತ್ರಿ ಅವರ ಕುಟುಂಬ ಹಾಗೂ ಸಹೋದ್ಯೋಗಿಗಳ ಹೇಳಿಕೆಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು