15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ ಏಷ್ಯಾಕಪ್ ಮೂಲಕ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಗಾಯದ ಕಾರಣ ಹಲವು ಸರಣಿ ತಪ್ಪಿಸಿಕೊಂಡಿದ್ದ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೂಡ ತಂಡಕ್ಕೆ ಮರಳಿದ್ದಾರೆ.
ಟೀಮ್ ಇಂಡಿಯಾ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇನ್ನುಳಿದಂತೆ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯಲ್ಲಿ ಕಾಣಿಸಿಕೊಂಡ ಪ್ರಮುಖ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯಾಕಪ್ಗಾಗಿ ಭಾರತ ತಂಡ ಈ ಕೆಳಗಿನಂತಿದೆ.
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯರ್ ಅಯ್ಯರ್ ಹಾಗೂ ದೀಪಕ್ ಚಹರ್.
🚨#TeamIndia squad for Asia Cup 2022 – Rohit Sharma (Capt ), KL Rahul (VC), Virat Kohli, Suryakumar Yadav, Deepak Hooda, R Pant (wk), Dinesh Karthik (wk), Hardik Pandya, R Jadeja, R Ashwin, Y Chahal, R Bishnoi, Bhuvneshwar Kumar, Arshdeep Singh, Avesh Khan.
— BCCI (@BCCI) August 8, 2022
ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ. ಇಲ್ಲಿ ಮೊದಲ ಸುತ್ತಿನಲ್ಲಿ ಗ್ರೂಪ್ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್ನಿಂದ 2 ತಂಡ, ಬಿ ಗ್ರೂಪ್ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ. ಇನ್ನು ಸೆಪ್ಟೆಂಬರ್ 3 ರಿಂದ ಸೂಪರ್- 4 ತಂಡಗಳ ಮುಖಾಮುಖಿ ಶುರುವಾಗಲಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ