ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಇಂಡಿಯಾ ಟೀಂ ಪ್ರಕಟ : ಕೊಹ್ಲಿ, ರೋಹಿತ್ ಔಟ್, ಕನ್ನಡಿಗ ರಾಹುಲ್ ಗೆ ನಾಯಕ ಪಟ್ಟ

Team Newsnap
1 Min Read

ಏಷ್ಯಾಕಪ್ ಗೆದ್ದ ಬಳಿಕ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾದ ಸವಾಲನ್ನು ಎದುರಿಸುತ್ತಿದೆ.

ಮೂರು ಪಂದ್ಯಗಳ ಏಕದಿನ ಸರಣಿ ಸೆಪ್ಟೆಂಬರ್ 22 ರಿಂದ 27 ರವರೆಗೆ ಭಾರತದ ನೆಲದಲ್ಲಿ ನಡೆಯಲಿದೆ. ವಿಶ್ವಕಪ್ ಗೂ ಮುನ್ನ ಉಭಯ ದೇಶಗಳ ಕೊನೆಯ ಏಕದಿನ ಸರಣಿ ಇದಾಗಿದೆ.

ಅ. 5ರಿಂದ ಭಾರತದಲ್ಲಿ ವಿಶ್ವಕಪ್ ಆರಂಭವಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ.

ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡ ಹೀಗಿದೆ :

ಕೆ.ಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಾಹುಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್ (ಫಿಟ್ನೆಸ್ಗೆ ಅನುಗುಣವಾಗಿ), ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್.
ಅಂದ್ಹಾಗೆ, ವಿಶ್ವಕಪ್ಗೂ ಮುನ್ನ ಸೆಪ್ಟೆಂಬರ್ 22, 24 ಮತ್ತು 27ರಂದು ಉಭಯ ದೇಶಗಳ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿವೆ.

ಮತ್ತೊಂದೆಡೆ, ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಈಗಾಗಲೇ ಘೋಷಿಸಲಾಗಿದೆ.

Share This Article
Leave a comment