March 26, 2025

Newsnap Kannada

The World at your finger tips!

politics , Election , contestant

ವಿಧಾನಸಭೆ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತ -HDK

Spread the love

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೊದಲ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿ ಮಾತನಾಡಿ ಪುತ್ರ ನಿಖಿಲ್ ಕುಮಾರಸ್ವಾಮಿ ಮುಂದಿನ ಎಲೆಕ್ಷನ್​ಗೆ ಸ್ಪರ್ಧೆ ಮಾಡುವುದನ್ನು ಖಚಿತಪಡಿಸಿದರು.ಸಾಲಕ್ಕೆ ಹೆದರಿ ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಲವಾರು ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆಯುತ್ತಿದ್ದಾರೆ. ಅಂತಿಮವಾಗಿ ಎಲ್ಲಿ ನಿಲ್ಲಬೇಕು ಎಂಬುದನ್ನು ಪಕ್ಷ ತೀರ್ಮಾನ ಮಾಡಲಿದೆ. ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಎಲ್ಲೋ ಒಂದು ಕಡೆ ಸ್ವರ್ಧೆ ಮಾಡಲಿದ್ದಾರೆ ಎಂದರು.

ಈ ಮೂಲಕ ಪುತ್ರ ನಿಖಿಲ್ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಆದಂತಾಗಿದೆ.

ಜೆಡಿಎಸ್‌ ತೊರೆಯಲು ಮುಂದಾಗಿದ್ದ ಹಿರಿಯ ಶಾಸಕ ಜಿ.ಟಿ ದೇವೇಗೌಡರನ್ನು ಮನವೊಲಿಕೆ ಮಾಡುವಲ್ಲಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಶಸ್ವಿಯಾಗಿದ್ದಾರೆ, ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ ಮತ್ತೆ ತನ್ನ ಕೋಟೆ ಭದ್ರಪಡಿಸಿಕೊಳ್ಳಲು ಕಸರತ್ತು ನಡೆಸಿದೆ.

ಅಲ್ಲದೇ ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡ ಹಾಗೂ ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್‌ ಗೌಡ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಣೆ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!