Trending

ಕಾವೇರಿ ನೀರು ಬಿಡುವಂತೆ ತ.ನಾಡು ವಿಧಾನಸಭೆ ನಿರ್ಣಯ

ಚೆನ್ನೈ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ತಮಿಳುನಾಡು ವಿಧಾನಸಭೆಯಲ್ಲಿ ಇಂದು ನಿರ್ಣಯ ಅಂಗೀಕರಿಸಲಾಯಿತು.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಣಯ ಮಂಡಿಸಿದರು. ಕರ್ನಾಟಕ ಕೃತಕ ಬಿಕ್ಕಟ್ಟು ಸೃಷ್ಟಿಸಿದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಸಿಎಂ ಹೇಳಿದರು.

ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಸ್ಟಾಲಿನ್ ನೇತೃತ್ವದ ಸದಸ್ಯರ ನಡುವಿನ ತೀವ್ರ ಚರ್ಚೆಯ ನಂತರ ನಿರ್ಣಯ ಅಂಗೀಕರಿಸಲಾಯಿತು. ಎಐಎಡಿಎಂಕೆ ನಿರ್ಣಯವನ್ನು ಬೆಂಬಲಿಸಿತು.

ಅಂತರರಾಜ್ಯ ನದಿ ವಿವಾದಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಆಡಳಿತಾವಧಿಯಲ್ಲಿ ಕೈಗೊಂಡ ವಿವಿಧ ಉಪಕ್ರಮಗಳನ್ನು ಸ್ಮರಿಸಿದ ಪಳನಿಸ್ವಾಮಿ ಈ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದರು.

ಈ ನಿರ್ಣಯ ಅಂಗೀಕಾರ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸಮಗ್ರ ಮತ್ತು ಪರಿಪೂರ್ಣ ಪರಿಹಾರ ನೀಡುವ ಗುರಿ ಹೊಂದಿರುವುದು ಕಾಣುತ್ತಿಲ್ಲ ಮತ್ತು ಈ ನಿರ್ಣಯಕ್ಕೆ ತಾನು ಪ್ರಸ್ತಾಪಿಸಿದ ಯಾವುದೇ ತಿದ್ದುಪಡಿಗಳನ್ನು ಸೇರಿಸುವ ಬಗ್ಗೆ ಸರ್ಕಾರ ಭರವಸೆ ನೀಡದ ಕಾರಣ ಬಿಜೆಪಿ ಸಭಾತ್ಯಾಗ ಮಾಡಿತು. ಎಚ್‍ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ.ಅಪ್ಪಾವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಈ ತಿದ್ದುಪಡಿಗಳು ನದಿಗಳ ರಾಷ್ಟ್ರೀಕರಣ ಮತ್ತು ಕೇಂದ್ರದ ಅಣೆಕಟ್ಟು ಸುರಕ್ಷತಾ ಮಸೂದೆಗೆ ಬೆಂಬಲ ಒಳಗೊಂಡಿವೆ.

Team Newsnap
Leave a Comment

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024