November 25, 2024

Newsnap Kannada

The World at your finger tips!

collage

ರಾಜ್ಯದಲ್ಲಿ ಜ. 15 ಪದವಿ ಕಾಲೇಜು ಆರಂಭ

Spread the love

ರಾಜ್ಯದಲ್ಲಿ ಜ. 15ರಿಂದ ಎಲ್ಲಾ ಪದವಿ, ಸ್ನಾತಕೋತ್ತರ, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಆಫ್‌ಲೈನ್ ತರಗತಿಗಳು ಆರಂಭವಾಗಲಿವೆ.

ಕಾಲೇಜು ಆರಂಭದ ಹಿನ್ನೆಲೆಯಲ್ಲಿ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಜಾರಿ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿ ಮೀರುವಂತಿಲ್ಲ. ಶಿಕ್ಷಣ ಸಂಸ್ಥೆಗಳ ಜತೆಗೆ, ವಿದ್ಯಾರ್ಥಿಗಳು ಕೂಡ ಪಾಲಿಸಬೇಕು. ಇನ್ನು, ವಿದ್ಯಾರ್ಥಿಗಳು ನೇರ ತರಗತಿಗಳಿಗೂ ಹಾಜರಾಗಬಹುದು, ಆನ್‌ಲೈನ್ ತರಗತಿಗೂ ಹಾಜರಾಗಬಹದು. ಆ ಆಯ್ಕೆ ವಿದ್ಯಾರ್ಥಿಗಳಿಗೇ ಇರುತ್ತದೆ. ಎರಡರಲ್ಲಿ ಒಂದಕ್ಕೆ ಹಾಜರಾತಿ ಕಡ್ಡಾಯ ಎಂದು ಡಿಸಿಎಂ ಹೇಳಿದ್ದಾರೆ.

ಹೊಸ ಮಾರ್ಗದರ್ಶಿ ಸೂತ್ರಗಳು :
  • ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಬೇಕು.
  • ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರುವುದಿಲ್ಲ.
  • ಮಾರ್ಗಸೂಚಿಯಂತೆ ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಬೇಕು.
  • ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ನಿಯಮಗಳನ್ನು ಮೀರುವಂತಿಲ್ಲ.

*ದೈಹಿಕ ಅಂತರ ಕಡ್ಡಾಯ. ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿ ಕೊಳ್ಳಬೇಕು.

  • ಬೋಧನಾ, ಪ್ರಾಕ್ಟಿಕಲ್, ಪ್ರಾಜೆಕ್ಟ್ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು ಸೇರಿದಂತೆ ಕೋವಿಡ್ ಶಿಷ್ಟಾಚಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಹೇಳಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!