December 22, 2024

Newsnap Kannada

The World at your finger tips!

tokiyo

ಮೋದಿ ಮನವಿಗೆ ಕ್ರೀಡಾಪಟುಗಳು ಸ್ಪಂದನೆ

Spread the love

ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಶುಭಾಶಯ ಹೇಳಿದ್ದರು. ಅದಕ್ಕೆ ಪ್ರತಿಯಾಗಿ ಆ ಕ್ರೀಡಾಪಟುಗಳು ಪ್ರಧಾನಿಯ ಮನವಿಯೊಂದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.


ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕನಿಷ್ಠ 75 ಶಾಲೆಗಳಿಗೆ ಹೋಗುವಂತೆ ತಾವು ಮಾಡಿದ ಮನವಿಗೆ ಕ್ರೀಡಾಪಟುಗಳು ಸಮ್ಮತಿಸಿದ್ದಾರೆ ಎಂದು ಸ್ವತಃ ಮೋದಿ ಅವರು ಮಂಗಳವಾರ ನವದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ “ಶಿಕ್ಷಕ ಪರ್ವ’ ಉದ್ಘಾಟಿಸಿದ ಸಂದರ್ಭದಲ್ಲಿ ಹೇಳಿದರು. ಭಾರತೀಯ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿ, ಭಾರತದ ಯುವ ಪೀಳಿಗೆಗೆ ಅವರು ಸ್ಪೂರ್ತಿಯಾಗಿದ್ದಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.


ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿ ಮಾಡುವುದಲ್ಲದೆ ಯುವಕರ ಭವಿಷ್ಯವನ್ನು ರೂಪಿಸಲಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.


ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳಲ್ಲಿ ಜನರು ಮುಖ್ಯ ಪಾತ್ರ ವಹಿಸಿದ್ದಾರೆ. ಜನರ ಸಹಭಾಗಿತ್ವ ಇಲ್ಲದೇ ಸ್ವಚ್ಛ ಭಾರತದಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರಲಿಲ್ಲ ಎಂದು ಪ್ರತಿಪಾದಿಸಿದರು.

Copyright © All rights reserved Newsnap | Newsever by AF themes.
error: Content is protected !!