ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಇಂದು ತುಮಕೂರು ಜಿಲ್ಲೆ ತಿಪಟೂರಿನಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿದ್ದು ಈ ಸಂಬಂಧ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಘಟನೆ ಬಗ್ಗೆ ಟ್ವಿಟ್ ಮಾಡಿದ್ದು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು