ಮುಂಬೈನ ಬಾಂದ್ರಾದಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಈ ದಾಳಿ ನಡೆದಿದ್ದು, ಗಾಯಗೊಂಡಿರುವ ಸೈಫ್ ಅಲಿ ಖಾನ್ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ದಾಳಿ ದರೋಡೆಗಾಗಿ ಬಂದಿದ್ದ ಕಿಡಿಗೇಡಿಗಳಿಂದ ನಡೆದಿದ್ದು, ಚಾಕುವಿನಿಂದ ಇರಿತಕ್ಕೊಳಗಾದ ನಟನಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೈಫ್ ಅಲಿ ಖಾನ್ ಅವರ ಪತ್ನಿ ಕರೀನಾ ಕಪೂರ್ ಹಾಗೂ ಇಬ್ಬರು ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.ಇದನ್ನು ಓದಿ –ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಹುಡುಕಾಟ ಸ್ಥಗಿತ
ಈ ಸಂಬಂಧ ಮುಂಬೈ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದ್ದು, ನಟನ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು