ಜಮೀರ್ ಅಹಮ್ಮದ್ ಖಾನ್ ಉಳಿದುಕೊಂಡಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ತಡರಾತ್ರಿ ದಾಳಿ ನಡೆಸಲಾಗಿದೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಮತ್ತು ಬೆಂಬಲಿಗರ ಕೊಠಡಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ, ಅವರಿಗೆ ಏನು ಸಿಕ್ಕಿಲ್ಲ.
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದ ಬಿಆರ್‍ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ. ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ತಂತ್ರವಾಗಿದೆ.
ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಜಮ್ಮು – ಕಾಶ್ಮೀರದಲ್ಲಿ ಎನ್ ಕೌಂಟರ್ : ಮೈಸೂರಿನ ಸೇನಾ ಅಧಿಕಾರಿ ಸೇರಿ ನಾಲ್ವರು ಹುತಾತ್ಮರು
ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ. ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು