ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪರಿಣಾಮ ಆಫ್ರಿಕನ್ ಪ್ರಜೆಗಳ ಮೇಲೆ ಪೋಲಿಸರು ಲಾಠಿ ಪ್ರಹಾರ ಮಾಡಿದ್ದಾರೆ. ಅಲ್ಲದೇ 6 ಕ್ಕೂ ಹೆಚ್ಚು ಆಫ್ರಿಕನ್ ಪ್ರಜೆಗಳನ್ನು ಬಂಧಿಸಿದ್ದಾರೆ.
ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣವನ್ನ ಖಂಡಿಸಿ ಬೆಂಗಳೂರಿನ ಜೆಸಿ ನಗರ ಠಾಣೆಯಲ್ಲಿ ಆಫ್ರಿಕನ್ಸ್ ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಕೆಲವು ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದೆ. ಆಗ ಪೊಲೀಸರು ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿಚಾರ್ಜ್ ಮಾಡಿ ಲಾಠಿ ರುಚಿ ತೋರಿಸಿದ್ದಾರೆ.
ಡ್ರಗ್ ಕೇಸ್ ಪ್ರಕರಣ ಸಂಬಂಧ ನಿನ್ನೆ ಜೆಸಿ ನಗರ ಠಾಣೆಯ ಪೊಲೀಸರು ಆಫ್ರಿಕನ್ ಪ್ರಜೆ ಜೊಯೆಲ್ ಮಾನ್ ಎಂಬಾತನನ್ನ ಬಂಧಿಸಿದ್ದರು.
ಬಂಧಿತ ಆರೋಪಿಗೆ ನಿನ್ನೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಜೊಯೆಲ್ ಮಾನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಅಂತಾ ಪೊಲೀಸರು ತಿಳಿಸಿದ್ದಾರೆ
ಈ ಘಟನೆಯನ್ನು ಆಫ್ರಿಕನ್ ಪ್ರಜೆಗಳು, ಕೊಲೆ ಎಂದು ಆರೋಪಿಸಿದ್ದಾರೆ. ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಆರೋಪಿಸಿರುವ ಆಫ್ರಿಕನ್ ಪ್ರಜೆಗಳು ಇಂದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಈ ವೇಳೆ ಕೆಲವು ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದರಿಂದ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಜೊತೆಗೆ ಕೆಲವು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment