ಮಂಡ್ಯ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳ ಬಗ್ಗೆ ಗಮನ ಹರಿಸಿ ಸೂಕ್ತ ರೀತಿಯಲ್ಲಿ ಕ್ರಮವಹಿಸಿ, ಜನರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಜಯರಾಂ ರಾಯಪುರ ಭಾನುವಾರ ಸೂಚನೆ ನೀಡಿದರು
ಮಂಡ್ಯದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಉಂಟಾದ ಮಳೆಹಾನಿ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಬೆಳೆ ಹಾನಿ ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅವರು ವರದಿ ನೀಡಿರುತ್ತಾರೆ. ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ಪಾವತಿಸಲು ಕ್ರಮವಹಿಸಿ ಎಂದರು. ಸರ್ಕಾರದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ -7 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ
ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಳೆ ನೀರು ಸೋರುವಿಕೆ, ಶಾಲೆ ಮತ್ತು ಅಂಗನವಾಡಿ ಕಟ್ಟಡ ಕುಸಿದಿರುವ ಕುರಿತು ಮಾಹಿತಿ ಪಡೆದು ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ತಿಳಿಸಿದರು.
ಚೆಸ್ಕಾಂ ಮತ್ತು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ವಿದ್ಯುತ್ ಕಂಬ, ರಸ್ತೆಗಳು ಹಾಗೂ ಅನೇಕ ಸಮಸ್ಯೆಗಳನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮವಹಿಸಿ ಎಂದು ಹೇಳಿದರು
ಆಧಿಕಾರಿಗಳು ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಬೇಕು. ಯಾವುದಾದರೂ ಯೋಜನೆಯಲ್ಲಿ ಬದಲಾವಣೆ ತಂದರೆ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂಬ ಅಭಿಪ್ರಾಯವಿದ್ದರೆ ನನ್ನೊಂದಿಗೆ ಮುಕ್ತವಾಗಿ ಚರ್ಚಿಸಿ ಎಂದರು.
ಜಲ್ ಜೀವನ್ ಮಿಷನ್ ಮನೆ ಮನೆಗೆ ನೆಲ್ಲಿ ವ್ಯವಸ್ಥೆ ಮಾಡಿ ನೀರು ಒದಗಿಸುವ ಉತ್ತಮ ಯೋಜನೆಯಾಗಿದ್ದು, ನಿಗಧಿಪಡಿಸಿರುವ ಅವಧಿಗೆ ಪೂರ್ಣಗೊಳಿಸಲು ಹಾಗೂ ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಏಜೆನ್ಸಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಂದರು.
ಜಿಲ್ಲೆಯಲ್ಲಿ ಅಂಕೇಗೌಡ ಅವರು ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಡೆಸುತ್ತಿರುವುದು ಒಳ್ಳೆಯ ವಿಷಯವಾಗಿದೆ. ಇಲ್ಲಿ ಹೆಚ್ಚು ಮಕ್ಕಳು ಭೇಟಿ ನೀಡುವಂತಾಗಬೇಕು. ಇದಕ್ಕಾಗಿ ಪುಸ್ತಕಗಳ ಜೋಡಣೆ ಕುರಿತಂತೆ ಹಾಗೂ ಪ್ರವಾಸಿ ತಾಣ ಮಾಡಲು ಯೋಜನೆ ರೂಪಿಸಿ ಎಂದರು.
ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುವ ವಸತಿನಿಲಯಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರವನ್ನು ಒದಗಿಸಬೇಕು. ಅಧಿಕಾರಿಗಳು ಭೇಟಿ ನೀಡಿದಾಗ ಮಕ್ಕಳೊಂದಿಗೆ ಊಟ ಸೇವಿಸಿ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿದಾಗ ವಸತಿನಿಲಯದಲ್ಲಿ ವಾಸ್ತವ್ಯ ಮಾಡಲಿದ್ದೇನೆ ಎಂದರು.
ಮೀನುಗಾರಿಕೆ ಮಾಡುವವರಿಗೆ ಜಿಲ್ಲೆಯಲ್ಲಿ ಒಳ್ಳೆಯ ಅವಕಾಶಗಳಿದ್ದು, ಇಲಾಖೆಯು ಮೀನುಗಾರರನ್ನು ಆರ್ಥಿಕವಾಗಿ ಸದೃಢ ಮಾಡುವ ಹಾದಿಯಲ್ಲಿ ಚಿಂತಿಸಬೇಕು.ಕೆರೆಗಳನ್ನು ಹರಾಜು ಮಾಡುವಾಗ ಹೋಬಳಿವಾರು ಮಾಡಿದರೆ ಮೀನುಗಾರರಿಗೆ ಉಪಯುಕ್ತವಾಗಲಿದೆ ಎಂದರು.
ಬೀಡಿ ಕಾಲೋನಿಯಲ್ಲಿ ಮಳೆ ಬಂದ ಸಂದರ್ಭದಲ್ಲಿ ಉಂಟಾಗುವ ತೊಂದರೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈಗಾಗಲೇ ಅಧಿಕಾರಿಗಳ ತಾಂತ್ರಿಕ ತಂಡ ರಚಿಸಲಾಗಿದೆ. ವರದಿಯನ್ನು ನೀಡಿದರೆ ಉನ್ನತ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಹುಲ್ಮನಿ ಅವರು ಮಾತನಾಡಿ ಜಿಲೆಯಲ್ಲಿ ಮನರೇಗಾ, ವಸತಿ ಯೋಜನೆ,ಲಿಂಕ್ ಡಾಕ್ಯೂಮೆಂಟ್, ಸ್ವಚ್ಛ ಭಾರತ್ ಮಿಷನ್, ಡಿಜಿಟಲ್ ಲೈಬ್ರರಿ ಹಾಗೂ ಇನ್ನಿತರೆ ಯೋಜನೆಗಳ ಬಗ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ
2022-23 ನೇ ಸಾಲಿನ 15 ನೇ ಹಣಕಾಸು ಆಯೋಗದ ನಿರ್ಬಂಧಿತ ಅನುದಾನದಡಿ 2.86 ಕೋಟಿ ರೂಗೆ ಕ್ರಿಯಾಯೋಜನೆಯನ್ನು ವಿವರಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಅನುಮೋದನೆ ಪಡೆದುಕೊಂಡರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಉಪ ಅರಣ್ಯಸಂರಕ್ಷಣಾಧಿಕಾರಿ ರುದ್ರೆನ್,ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಜಿ.ಪಂ.ಉಪಕಾರ್ಯದರ್ಶಿ ಸರಸ್ವತಿ, ಉಪವಿಭಾಗಾಧಿಕಾರಿಗಳಾದ ಬಿ.ಸಿ.ಶಿವಾನಂದ ಮೂರ್ತಿ, ಆರ್.ಐಶ್ವರ್ಯ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ