ಕೋಲಾರ: ಕೋಲಾರ ಹೊರವಲಯದಲ್ಲಿ ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಪಾರಾಗಿರುವ ಘಟನೆ ಘಟನೆ ನಡೆದಿದೆ.
ಬಂಗಾರಪೇಟೆ ಮುಖ್ಯರಸ್ತೆ ಸಹಕಾರ ನಗರದಲ್ಲಿ ಘಟನೆ ನಡೆದಿದ್ದು , ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಮೃತರು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಸಾಯಿ ಗಗನ್ ಪಾರಾಗಿದ್ದು ,ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ.ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯವರ್ಧಕ ಕಷಾಯಗಳು
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು , ಕೋಲಾರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.