December 27, 2024

Newsnap Kannada

The World at your finger tips!

cri

ಟಿ20 ಸರಣಿಯ ಉಳಿದ 3 ಪಂದ್ಯ ಕ್ರೀಡಾಂಗಣದಲ್ಲಿ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಇಲ್ಲ

Spread the love

ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಟಿ-20 ಸರಣಿಯ ಉಳಿದ ಮೂರು ಪಂದ್ಯಗಳನ್ನು ಪ್ರೇಕ್ಷಕರಿಲ್ಲದೇ ನಡೆಸಲು ಬಿಸಿಸಿಐ ನಿರ್ಧರಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮುನ್ನೆಚ್ಚರಿಕೆ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ ವಕ್ತಾರರು, ಉಳಿದ ಟಿ-20 ಪಂದ್ಯಗಳನ್ನು ಪ್ರೇಕ್ಷಕರಿಲ್ಲದೇ ನಡೆಸಲು ತೀರ್ಮಾನಿಸಿದ್ದೇವೆ. ಕ್ರಿಕೆಟನ್ನು ಪ್ರೀತಿಸುವ ಅಭಿಮಾನಿಗಳಿಗಾಗಿಯೇ ಈ ನಿರ್ಧಾರವನ್ನು ಮಾಡಿದ್ದೇವೆ ಎಂದರು.

ಅಭಿಮಾನಿಗಳ ರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ. ವೈರಸ್​ ವಿರುದ್ಧ ಹೋರಾಟ ಮಾಡಲು ಇದು ಮಹತ್ವದ ನಡೆಯಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಟಿಕೆಟ್ ಬುಕ್​ ಮಾಡಿರುವವರಿಗೆ ಹಣವನ್ನು ಹಿಂತಿರುಗಿಸಲಾಗುವುದು ಎಂದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!