545 ಪಿಎಸ್‍ಐ ಹುದ್ದೆಗಳ ನೋಟಿಫಿಕೇಶನ್ ಮುಗಿದಿದೆ. 402ರಲ್ಲಿ ಮಾಡೋಣ ಎಂಬ ಮಾತುಗಳ ಜೊತೆಗೆ ಪರೀಕ್ಷಾ ಕೇಂದ್ರವನ್ನೇ ಮೊದಲು ಬುಕ್ ಮಾಡಲು ಅರ್ಜಿ ಸಂಖ್ಯೆಯನ್ನು ಬೇಗನೇ ಕಳುಹಿಸಿ ಎಂಬ ಹಲವಾರು ಸಂಭಾಷಣೆಗಳನ್ನು ಹೊಂದಿರುವ ಸ್ಫೋಟಕ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ, ಪಿಎಸ್‍ಐ ನೇಮಕಾತಿಯ ಸಂಬಂಧ ಇಬ್ಬರು ಆರೋಪಿಗಳ ಸಂಭಾಷಣೆಯಿದೆ. ಇದರಲ್ಲಿ ಓರ್ವ ವ್ಯಕ್ತಿ ಪಿಎಸ್‍ಐ ಆಗಿ ಆಯ್ಕೆಯಾಗಿದ್ದಾನೆ. ಇನ್ನೋರ್ವ ವ್ಯಕ್ತಿ ಮಧ್ಯವರ್ತಿಯಾಗಿದ್ದಾನೆ. ಈ ಪ್ರಕರಣದಲ್ಲಿ ಮೇಲಿಂದ ಕೆಳಗಿನವರೆಗೂ ಭ್ರಷ್ಟಾಚಾರ ನಡೆದಿದೆ ಎಂದರು
ಈ ಆಡಿಯೋದಲ್ಲಿ ಈ 545ರ ಅಕ್ರಮ ಜೊತೆ, ಜೊತೆಗೆ ಮುಂದಿನ 402 ಪೋಸ್ಟ್‌ಗಳನ್ನು ಸಹ ಬುಕ್ ಮಾಡಲಾಗಿದೆ. ಈ ಸಂಬಂಧ 371 ಜೆ ಸರಿಯಾಗಿ ಜಾರಿ ಆಗಿಲ್ಲ ಅಕ್ರಮ ನಡೆದಿದೆ ಎಂದು ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳು ಕೋರ್ಟ್‍ಗೆ ಹೋಗಿದ್ದಾರೆ. ಆದರೂ ಏನು ಆಗಲ್ಲ ಅಂತ ಆಯ್ಕೆಯಾದ ಪಿಎಸ್‍ಐ ಹೇಳುತ್ತಾನೆ ಎಂದರು
ಈ ಸರ್ಕಾರದಲ್ಲಿ ನಮ್ಮ ಭಾಗದವರ ಪರಿಸ್ಥಿತಿ ನೋಡಿ. ಈ ಪ್ರಕರಣದಲ್ಲಿ ಸರ್ಕಾರ, ಪರೀಕ್ಷಾ ಕೇಂದ್ರ, ಸಿಬ್ಬಂದಿ ಎಲ್ಲರೂ ಶಾಮಿಲಾಗಿದ್ದಾರೆ. ಅಭ್ಯರ್ಥಿಯ ಎಕ್ಸಾಂ ಸೆಂಟರ್ ಬುಕ್ ಮಾಡುವುದರಿಂದ ಹಿಡಿದು ಎಲ್ಲಾ ಕೂಡ ನೇಮಕಾತಿ ಪರೀಕ್ಷೆಯಲ್ಲಿ ಬುಕ್ ಆಗುತ್ತವೆ ಎಂದು ತಿಳಿಸಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು