ಬೆಂಗಳೂರು ದಕ್ಷಿಣ ವಲಯದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ಸಂಚಾರವು ಆಗಸ್ಟ್ 29 ರಂದು (ಭಾನುವಾರ) ಉದ್ಘಾಟನೆಯಾಗಲಿದೆ.
ಕೇಂದ್ರ ನಗರ ಅಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ರಸ್ತೆ-ಕೆಂಗೇರಿ ಮಾರ್ಗ ಮೆಟ್ರೋ ಸಂಚಾರವನ್ನು ಆಗಸ್ಟ್ 29 ರಂದು (ಭಾನುವಾರ) ಮಧ್ಯಾಹ್ನ 12 ಗಂಟೆಗೆ ಉದ್ಘಾಟಿಸಲಿದ್ದಾರೆ.
ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಈ ವಿಷಯ ತಿಳಿಸಿ,ಲೋಕಾರ್ಪಣೆಗೆ ಸಿದ್ದವಾಗುತ್ತಿರುವ ಬೆಂಗಳೂರು ದಕ್ಷಿಣ ವಲಯದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗವನ್ನು ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಆಗಸ್ಟ್ 11 ಮತ್ತು 12 ರಂದು ಪರಿಶೀಲನೆ ನಡೆಸಿ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದರು.
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು