ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಮಂಗಳವಾರ ಮುಂಜಾನೆ 8:30ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ .
ಇತ್ತೀಚೆಗೆ ಅದ್ಧೂರಿಯಾಗಿ ಸೀಮಂತ ಕಾರ್ಯಕ್ರಮವನ್ನು ಮುಗಿಸಿದ್ದ ಅವಿವಾ ಮತ್ತು ಅಭಿಷೇಕ್, ಶೀಘ್ರದಲ್ಲೇ ತಮ್ಮ ಮನೆಯ ಹೊಸ ಅತಿಥಿಯ ವಿಚಾರವನ್ನು ಹಂಚಿಕೊಂಡಿದ್ದರು.
ಈಗ ಅವಿವಾ ಗಂಡು ಮಗುವಿಗೆ ಜನ್ಮ ನೀಡಿರುವುದು ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತೋಷ ತಂದಿದೆ.
ಅಭಿಷೇಕ್ ಅಂಬರೀಶ್ ಅವರ ಅಭಿಮಾನಿಗಳು “ಮಂಡ್ಯದ ಗಂಡು” ಅಂಬರೀಶ್ ಮತ್ತೆ ಹುಟ್ಟಿ ಬಂದಂತೆ ಮನಸಾರೆ ಹರ್ಷಿಸುತ್ತಿದ್ದಾರೆ.ಇದನ್ನು ಓದಿ –ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಅಭಿಷೇಕ್ ಮತ್ತು ಅವಿವಾ ಅವರ ಮದುವೆ ಕಳೆದ ವರ್ಷ ಜೂನ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆದಿತ್ತು.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ