ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರು ಇಬ್ಬರು ಮೂಲತಃ ಪತ್ರಕರ್ತರಾಗಿ, ಚಳವಳಿಗಾರರಾಗಿ ದೇಶಕ್ಕೆ ತಮ್ಮ ಬದುಕು ಮುಡಿಪಾಗಿಟ್ಟದ್ದನ್ನು ಯಾರೂ ಮರೆಯುವಂತಿಲ್ಲ.
ಭಾರತದ ಸ್ವಾತಂತ್ರ್ಯ ಚಳವಳಿಗೆ ಈ ಮಹಾನ್ ವ್ಯಕ್ತಿಗಳ ಕೊಡುಗೆ ಅಪಾರ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ಲ್ಲಿ ಪ್ರಶಸ್ತಿ ದತ್ತಿ ನಿಧಿ ಸ್ಥಾಪನೆ ಮಾಡಲು
ಬಾಗಲಕೋಟೆ ಜಿಲ್ಲೆ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಭಾಷ್ ಹೊದ್ಲೂರು 2.50 ಲಕ್ಷ (ಎರಡೂವರೆ ಲಕ್ಷ ರೂ) ರೂಗಳನ್ನು ಸಂಘದ ಬ್ಯಾಂಕ್ ಖಾತೆಗೆ ಕಳುಹಿಸಿಕೊಟ್ಟಿದ್ದಾರೆ.
ಈ ಹಣದಲ್ಲಿ ಬರುವ ವಾರ್ಷಿಕ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ನೀಡಲಾಗುವುದು.
ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಉದಾರ ದೇಣಿಗೆ ನೀಡಿದ ಶ್ರೀ ಸುಭಾಷ್ ಹೊದ್ಲೂರು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು
ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು