December 22, 2024

Newsnap Kannada

The World at your finger tips!

health , awareness , program

Awareness programs are necessary to build a healthy society: Nalini Kumari A.M ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಅಗತ್ಯ: ನ್ಯಾ ನಳಿನಿ ಕುಮಾರಿ ಎ.ಎಂ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಅಗತ್ಯ: ನ್ಯಾ ನಳಿನಿ ಕುಮಾರಿ ಎ.ಎಂ

Spread the love

ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ. ನಳಿನಿ ಕುಮಾರಿ ಸಲಹೆ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.ತುಮಕೂರು ನಗರ ಕ್ಷೇತ್ರ: ಗೋವಿಂದರಾಜುಗೆ JDS ಟಿಕೆಟ್ – HDK

ಸಂವಿಧಾನವನ್ನು ಡಾ:ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಸಂವಿಧಾನದ ಅವಶ್ಯಕತೆ, ಪ್ರಜಾಪ್ರಭುತ್ವ, ಸಂವಿಧಾನದ ಪೀಠಿಕೆ ಕುರಿತಂತೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಲಹೆಗಳನ್ನು ನೀಡಿದರು.

ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ: ಆಶಾಲತಾ ಮಾತನಾಡಿ ಏಡ್ಸ್ ಅಂತ್ಯಗೊಳಿಸಲು ಅಸಮಾನತೆಯನ್ನು ಕೊನೆಗಾಣಿಸಲು ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡಲು ಹಾಗೂ ಪ್ರತಿಯೊನ್ನರನ್ನು ಖುಷಿಯಾಗಿಡಲು ವಿಶ್ವವು ಒಂದಾಗಬೇಕಿದೆ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಏಡ್ಸ್ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಏಡ್ಸ್ ರೋಗಿಗಳಿಗೆ ಆಪ್ತ ಸಮಾಲೋಚನೆ ಮಾಡಿ ಪರೀಕ್ಷೆ ಮಾಡಲು 14 ಕೇಂದ್ರಗಳಿವೆ. ಹೆಚ್.ಐ.ವಿ ಪತ್ತೆಯಾದ ನಂತರ ಅವರಿಗೆ ಉಚಿತವಾಗಿ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಎ.ಐ.ಎಮ್.ಎಸ್ ವೈದ್ಯಕೀಯ ಕಾಲೇಜಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಎರಡು ಎ.ಆರ್.ಟಿ ಕೇಂದ್ರಗಳಿವೆ ಎಂದರು.

2022-23 ನೇ ಸಾಲಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ 56824 ಸಾಮಾನ್ಯ ಜನರು ಪರೀಕ್ಷೆಗೆ ಒಳಗಾಗಿದ್ದಾರೆ ಅವರಲ್ಲಿ 217 ಜನರಿಗೆ ಹೆಚ್.ಐ.ವಿ ಸೋಂಕಿತರು ಹಾಗೂ16784 ಗಭೀರ್ಣಿ ಮಹಿಳೆಯರನ್ನು ಪರೀಕ್ಷೆಗೊಳಪಡಿಸಿದ್ದು, ಇಬ್ಬರಲ್ಲಿ ಹೆಚ್.ಐ.ವಿ ಸೋಂಕು ಕಂಡುಬಂದಿದೆ .

2015 ರಿಂದ ವರದಿಯನ್ನು ಪರಿಗಣಿಸಿದರೆ ಹೆಚ್.ಐ.ವಿ ಸೋಂಕು ಕಡಿಮೆಯಾಗುತ್ತಿದೆ. ಆದರೆ ಯುವ ಜನರಲ್ಲಿ ಹೆಚ್ಚು ಏಡ್ಸ್ ಸೋಂಕು ಕಂಡು ಬರುತ್ತಿದೆ. ಯುವ ಜನತೆ ಏಡ್ಸ್ ರೋಗ ಹರಡದಂತೆ ಇರುವ ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹದ ಅಧೀಕ್ಷಕ ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ: ಧನಂಜಯ್, ಮಿಮ್ಸ್ ಸಮುದಾಯ ವೈದ್ಯಶಾಸ್ತç ವಿಭಾಗದ ಸಹ ಪ್ರಾಧ್ಯಪಕ ಡಾ: ಸುಭಾಷ್ ಬಾಬು, ಮಿಮ್ಸ ನಿರ್ದೇಶಕ ಡಾ: ಬಿ.ಜಿ ಮಹೇಂದ್ರ, ವಕೀಲರ ಸಂಘದ ಅಧ್ಯಕ್ಷ ನಾಗರಾಜು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ: ಮಹಾಲಿಂಗೇಗೌಡ, ಆರ್.ಸಿ.ಎಚ್. ಅಧಿಕಾರಿ ಡಾ: ಅನಿಲ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!