December 19, 2024

Newsnap Kannada

The World at your finger tips!

ayanuru manju

ಆಯನೂರು ಮಂಜುನಾಥ್, ನಾಗರಾಜ್ ಗೌಡ ಕಾಂಗ್ರೆಸ್‌ಗೆ ಸೇರ್ಪಡೆ

Spread the love

ಬಿಜೆಪಿ ತ್ಯಜಿಸಿ ಜೆಡಿಎಸ್ ಸೇರಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಾಗರಾಜ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಅವರನ್ನು ಪಕ್ಷದ ಬಾವುಟವನ್ನು ನೀಡಿ ಕಾಂಗ್ರೆಸ್‌ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಈ ಹಿಂದೆಯೇ ಆಯನೂರು ಮಂಜುನಾಥ್ ಪಕ್ಷಕ್ಕೆ ಬರ್ತೀವಿ ಅಂತ ಹೇಳಿದ್ರು. ಆದರೆ ಕಾರಣಾಂತರಗಳಿಂದ ಸೇರಿಸಿಕೊಳ್ಳಲಾಗಿರಲಿಲ್ಲ ಎಂದರು. ಕಾಂಗ್ರೆಸ್ ಪಾರ್ಟಿ ಬಸ್ಸು ಸೀಟು ತರ ಆಗಬಾರದು. ಹತ್ತೋದು ಇಳಿಯೋದು ಆಗಬಾರದು. ಕಾಂಗ್ರೆಸ್ ಸೇರಿಕೊಂಡು ಪಕ್ಷದಲ್ಲೇ ಇರೋದೆ ಒಂದು ಸುದೈವ. ಕಾಂಗ್ರೆಸ್‌ಗೆ ಇತಿಹಾಸ ಇದೆ. ಕಾಂಗ್ರೆಸ್‌ಗೆ ಇರುವ ಇತಿಹಾಸ ಜೆಡಿಎಸ್ ಬಿಜೆಪಿಗೆ ಇಲ್ಲ ಎಂದರು.

ಪಕ್ಷಕ್ಕೆ ದುಡಿದವರನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ. ಪಕ್ಷಕ್ಕೆ ಬಂದವರನ್ನು ಪಕ್ಕಕ್ಕೆ ತಳ್ಳುವುದಕ್ಕೆ ಡಿಕೆ ಶಿವಕುಮಾರ್‌ ಯಾವತ್ತೂ ಅವಕಾಶ ನೀಡಲ್ಲ ಎಂದು ಇದೇ ಸಂದರ್ಭದಲ್ಲಿ ವಲಸಗರಿಗೆ ಭರವಸೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ಮಧುಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಚಂದ್ರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!