ರಾಜ್ಯದಲ್ಲಿ ಇನ್ನು ಮುಂದೆ ಬೆಳಗಿನ ಜಾವ ಮೈಕ್ ಮೂಲಕ ಆಜಾನ್ ಕೂಗದಿರಲು ಮುಸ್ಲಿಂ ಧರ್ಮ ಗುರುಗಳು ನಿರ್ಧಾರ ಕೈಗೊಂಡಿದ್ದಾರೆ. ಶರಿಯತ್ ಎ ಹಿಂದ್ ಸಂಘಟನೆಯ ಅಡಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಶಾಸಕ ಜಮೀರ್ ಅಹ್ಮದ್, ಹ್ಯಾರಿಸ್ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಉಪಸ್ಥಿತರಿದ್ದರು.
ಧಾರ್ಮಿಕ ಕೇಂದ್ರಗಳಲ್ಲಿ ಲೌಡ್‌ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದವು ನಂತರದ ದಿನಗಳಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಯಿತು. ಸಂಘರ್ಷ ಬಿಟ್ಟು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮುಸ್ಲಿಂ ಧರ್ಮ ಗುರುಗಳು ಉತ್ತಮ ನಿರ್ಧಾರವೊಂದಕ್ಕೆ ಬಂದಿದ್ದಾರೆ.
ಇದನ್ನು ಓದಿ :ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸಲು ಅಪರೇಷನ್ ಕಮಲ ಫಿಕ್ಸ್: ಎಸ್.ಟಿ.ಸೋಮಶೇಖರ್
ಮೈಕ್ ಮೂಲಕ ಆಜಾನ್ ಕೂಗುವುದಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರು. ಇದು ದೇಶಾದ್ಯಂತ ಭಾರಿ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಯಿತು. ಮಸೀದಿಗಳಲ್ಲಿ ಆಜಾನ್ ಕೂಗಿದರೆ, ಹಿಂದೂ ದೇವಾಲಯಗಳಲ್ಲಿ ಮಂತ್ರಘೋಷ ಮೊಳಗಿಸಲಾಗುವುದು, ಹನುಮಾನ್ ಚಾಲೀಸಾ ಪಠಿಸಲಾಗುವುದು ಎಂದು ಹಿಂದೂಪರ ಸಂಘಟನೆಗಳು ಘೋಷಿಸಿದ್ದವು. ಲೌಡ್‌ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದವು.
ಈ ಸಂಬಂಧ ಆರಂಭದಲ್ಲಿ ಸರ್ಕಾರ ಯಾವುದೇ ಕ್ರಮಕೈಗೊಳ್ಳದೇ ಇದ್ದಾಗ, ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದವು. ಕೂಡಲೇ ಎಚ್ಚೆತ್ತ ಸರ್ಕಾರ, ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಲೌಡ್‌ಸ್ಪೀಕರ್ ಬಳಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು.
ಈ ಬೆನ್ನಲ್ಲೇ ಅನೇಕ ಹಿಂದೂ ದೇವಾಲಯಗಳು, ಮಸೀದಿಗಳು ಹಾಗೂ ಚರ್ಚ್‌ಗಳಿಗೆ ನೋಟಿಸ್ ನೀಡಲಾಯಿತು. ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ