ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ನೂತನ ಲೋಕಾಯುಕ್ತ ಬಿ.ಎಸ್. ಪಾಟೀಲ್

Team Newsnap
1 Min Read
B S Patil took voth in kannada proudly

ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು ಇದನ್ನು ಓದಿ –MGM ಕಂಪನಿ ಮೇಲೆ ಐಟಿ ದಾಳಿ; ಬೆಂಗಳೂರು ಸೇರಿ ಒಟ್ಟು 50 ಕಡೆ ಶೋಧ

ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಕನ್ನಡದಲ್ಲೇ ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ಸೋಮಣ್ಣ, ಹಾಲಪ್ಪ ಆಚಾರ್ ಸೇರಿ ಹಲವು ಸಚಿವರು, ಅಧಿಕಾರಿಗಳು, ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ಲೋಕಾಯುಕ್ತರ ಪರಿಚಯ :

ಬಿ.ಎಸ್. ಪಾಟೀಲ್ ಮೂಲತಃ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಪಡೇಕನೂರು ಗ್ರಾಮದವರು.

ಇವರು ಉಪಲೋಕಾಯುಕ್ತ ಹುದ್ದೆಯಿಂದ ಲೋಕಾಯುಕ್ತ ಹುದ್ದೆಗೇರಿದ್ದಾರೆ. ಈ ಹಿಂದೆ ಎರಡೂವರೆ ವರ್ಷಗಳಿಂದ ಉಪಲೋಕಾಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

ಭೀಮನಗೌಡ ಸಂಗನಗೌಡ ಪಾಟೀಲ್ ಲೋಕಾಯುಕ್ತರಾಗಿರುವ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಂಭ್ರಮ ಮನೆಮಾಡಿದೆ.

ಬಿ.ಎಸ್. ಪಾಟೀಲ್ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಣ ಸ್ವಗ್ರಾಮದಲ್ಲಿ ಕಲಿತಿದ್ದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕಲಾ ವಿಭಾಗ, ಲಾ ಕಾಲೇಜಿನಲ್ಲಿ ಎಲ್ಎಲ್‌ಬಿ ಪದವಿ ಪೂರೈಸಿದ್ದಾರೆ.

Share This Article
Leave a comment