ಬಿ ವೈ ವಿಜಯೇಂದ್ರನಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟ

Team Newsnap
1 Min Read
  • ಬಿಎಸ್ ವೈ ಅವರ ಪುತ್ರ ಹಾಗೂ ಶಾಸಕ ಬಿ.ವೈ ವಿಜೇಂದ್ರ ನೇಮಕ
  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನೇಮಕ ಮಾಡಿ ಆದೇಶ
  • ಹಲವು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ನಡೆದಿತ್ತು ಚರ್ಚೆ

ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ ವೈ ಪುತ್ರ ಹಾಗೂ ಶಾಸಕ ಬಿ.ವೈ ವಿಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ನಳಿನ್‌ ಕುಮಾ ಕಟೀಲ್‌ ಅವರನ್ನು ಕೆಳಗಡೆ ಇಳಿಸಬೇಕು ಎಂಬ ಆಗ್ರಹ ಪಕ್ಷದ ಒಳಗಡೆಯಿಂದಲೇ ಬಂದಿತ್ತು. 

ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಸರು ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಲೋಕಸಭಾ ಚುನಾವಣೆ ದೃಷ್ಟಿಯಿಂದ  ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರನ್ನು ಸಿಎಂ ಪಟ್ಟದಿಂದ ಇಳಿಸಿದ್ದ ಕಾರಣ ಪಕ್ಷಕ್ಕೆ ಹಿನ್ನಡೆಯಾಗಿದೆ.  ಯಡಿಯೂರಪ್ಪನವರನ್ನು ಕಡೆಗಣನೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು.ಮದ್ದೂರು ತಾಲೂಕಿನಲ್ಲಿ ಜೆಡಿಎಸ್ ನಾಯಕರಿಂದ ಬರ ಅಧ್ಯಯನ ಆರಂಭ

ಈಗ ಹೈಕಮಾಂಡ್‌ ಅಳೆದು ತೂಗಿ ಲೋಕಸಭಾ ಚುನಾವಣೆ ಮತ್ತು ಪಕ್ಷದ ಸಂಘಟನೆ ದೃಷ್ಟಿಯಿಂದ  ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನದಂತಹ ಮಹತ್ವದ  ಜವಾಬ್ದಾರಿ ನೀಡಿದೆ.

Share This Article
Leave a comment