ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ನಿಷೇಧದ ನಡುವೆಯೂ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಮೇಲೆ ಹದ್ದಿನ ಕಣ್ಣಿಡಲು ಹಾಗೂ ಅಕ್ರಮಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಇಸ್ರೋ ಮ್ಯಾಪಿಂಗ್ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ.
ಜಿಲ್ಲಾಡಳಿತ ತಾತ್ಕಾಲಿಕ ನಿಷೇಧ ವಿಧಿಸಿದ್ದರೂ ಆದೇಶ ಉಲ್ಲಂಘಿಸಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿದೆ ಎನ್ನುವ ದೂರು ಪದೇ ಪದೇ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಬೆಟ್ಟದ ಮೇಲೆ ನಿಗಾ ಇಡಲು ಇಸ್ರೋ ಮ್ಯಾಪಿಂಗ್ ತಂತ್ರಜ್ಞಾನ ಬಳಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಏನ್ ಇದು ಮ್ಯಾಪಿಮಗ್ : ಇಸ್ರೋ ಮ್ಯಾಪಿಂಗ್‍ನಲ್ಲಿ ಬೆಟ್ಟದಲ್ಲಿ ನಡೆಯುವ ಚಟುವಟಿಕೆಗಳ ನಿಖರ ಮಾಹಿತಿ ಸಂಗ್ರಹಿಸುವುದರ ಜತೆಗೆ 2ಡಿ ಮತ್ತು 3ಡಿ ಚಿತ್ರಗಳನ್ನು ಪಡೆದುಕೊಳ್ಳಬಹುದು. ರಿಮೋಟ್ ಸೆನ್ಸಿಂಗ್ ಡೇಟಾದಿಂದ ಪ್ರತಿ ವಾರದ ಮಾಹಿತಿಯನ್ನು ತೆಗೆದುಕೊಳ್ಳಬಹುದು. ಇದರಿಂದ ಭೂಮಿಯ ಮೇಲಿನ ಹವಾಮಾನ, ಕಲ್ಲಿನ ಸ್ವರೂಪ, ಪ್ರಾಕೃತಿಕ ಬದಲಾವಣೆ, ಭೂಮಿಯ ವೈವಿಧ್ಯತೆ, ಅರಣ್ಯ ಪ್ರದೇಶದಲ್ಲಿ ನೀರು ಹಾಗೂ ಮೇವಿನ ಸಂಗ್ರಹವನ್ನು ಗಮನಿಸಬಹುದಾಗಿದೆ.
ಈಗಾಗಲೇ ದೇಶದ ವಿವಿಧೆಡೆ ಈ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಈ ಕುರಿತು ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಷನ್ ಸೆಂಟರ್ ಅನ್ನು ಜಿಲ್ಲಾಡಳಿತ ಸಂರ್ಪಸಿ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದೆ.
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಐಶ್ವರ್ಯಗೌಡ ವಂಚನೆ ಪ್ರಕರಣ: ಶಾಸಕ ನರೇಂದ್ರಸ್ವಾಮಿಯ ಕೈವಾಡ ಶಂಕೆ, ಅನ್ನದಾನಿಯ ಗಂಭೀರ ಆರೋಪ