ಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು; ಇತಿಹಾಸ ನಿರ್ಮಿಸಿದ ಆಟಗಾರ್ತಿ!

Team Newsnap
1 Min Read

ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

2014ರಲ್ಲಿ ಕಂಚು, 2018ರಲ್ಲಿ ಬೆಳ್ಳಿ ಗೆದ್ದಿದ್ದ ಪಿವಿ ಸಿಂಧು ಇದೀಗ ಚಿನ್ನ ಗೆದ್ದಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಸೆಟ್‌ಗಳಿಂದ ಸೋಲಿಸಿದ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ.

pv sindhu1

ಇದು ಕಾಮನ್​ವೆಲ್ತ್ ಗೇಮ್ಸ್​ನ 2022 ರ ಅಂತಿಮ ದಿನವಾಗಿದೆ ಭಾರತವು ಇನ್ನೂ ಐದು ಚಿನ್ನದ ಪದಕಗಳನ್ನು ಗೆಲ್ಲುವ ಅವಕಾಶವನ್ನು ಹೊಂದಿದೆ.

ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್​ ಕೂಡ ಗಮನ ಸೆಳೆಯುತ್ತಿದ್ದಾರೆ. ಅವರು ಬಿಗ್​ ಬಾಸ್​ ಮನೆಗೆ ಹೋಗುವುದಕ್ಕೂ ಮುನ್ನವೇ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಈಗ ಮತ್ತೆ ಸದ್ದು ಮಾಡುತ್ತಿದ್ದಾರೆ.

ಇದೇ ವೇಳೆ ಕಾಮನ್​ವೆಲ್ತ್ ಗೇಮ್ಸ್​ 2022ರ 11 ನೇ ದಿನದಂದು ಪುರುಷರ ಡಬಲ್ಸ್​ನಲ್ಲಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಕೂಡ ಫೈನಲ್‌ನಲ್ಲಿ ಆಡಲಿದ್ದಾರೆ. ಇದನ್ನು ಓದಿ – ಮೊಬೈಲ್​​ ಫೋನ್​​ ಬೇಡಿಕೆ : ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ!

ಸಂಜೆ ವೇಳೆಗೆ ನಡೆಯಲಿರುವ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಚಿನ್ನದ ಪದಕಕ್ಕಾಗಿ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಟೇಬಲ್ ಟೆನಿಸ್‌ನಲ್ಲಿ ಅಚಂತ ಶರತ್ ಕಮಲ್ ಅವರು ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಡುವ ಮೂಲಕ ಅಂತಿಮ ಪದಕಕ್ಕಾಗಿ ಸೆಣಸಲಿದ್ದಾರೆ.

ಭಾರತವು ಈವರೆಗೆ ಕಾಮನ್​ವೆಲ್ತ್ ಗೇಮ್ಸ್ 2022ರಲ್ಲಿ 56 ಪದಕಗಳನ್ನು (19 ಚಿನ್ನ, 15 ಬೆಳ್ಳಿ, 22 ಕಂಚು) ಪದಗಳನ್ನು ಗಳಿಸಿದೆ.

ಸಿಂಧು

Share This Article
Leave a comment