- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ
- ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ
- ಮಹಿಳೆ ಕಿಡ್ನಾಪ್ ಕೇಸ್ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನ
ಬೆಂಗಳೂರು : ಮಹಿಳೆಯ ಕಿಡ್ನಾಪ್ ಕೇಸ್ನಲ್ಲಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ.
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದ್ದರು.
ಹೆಚ್.ಡಿ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇರಬಹುದು ಎಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮನೆಗೆ 10 ಜನ ಅಧಿಕಾರಿಗಳು ಭೇಟಿ ನೀಡಿದ್ದರು.
ಕೆಲ ಸಮಯದ ಬಳಿಕ ಅಧಿಕಾರಿಗಳು ರೇವಣ್ಣರನ್ನು ಅರೆಸ್ಟ್ ಮಾಡಿದ್ದಾರೆ.ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡ ನಿವಾಸದ ಒಳಗೆ ಅಧಿಕಾರಿಗಳನ್ನು ಬಿಟ್ಟಿಲ್ಲ. ಹೀಗಾಗಿ 10 SIT ಅಧಿಕಾರಿಗಳು ಬಾಗಿಲ ಬಳಿಯೇ ನಿಂತುಕೊಂಡಿದ್ದರು.
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು