ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

Team Newsnap
1 Min Read
  • ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ
  • ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ
  • ಮಹಿಳೆ ಕಿಡ್ನಾಪ್​ ಕೇಸ್​ನಲ್ಲಿ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಬಂಧನ

ಬೆಂಗಳೂರು : ಮಹಿಳೆಯ ಕಿಡ್ನಾಪ್​ ಕೇಸ್​ನಲ್ಲಿ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದ ಬೆನ್ನಲ್ಲೇ ಎಸ್​​ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ.

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾ ಮಾಡಿದ ಬೆನ್ನಲ್ಲೇ ಎಸ್​​ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ತೆರಳಿದ್ದರು.

ಹೆಚ್​.ಡಿ ರೇವಣ್ಣ ದೇವೇಗೌಡರ ನಿವಾಸದಲ್ಲಿ ಇರಬಹುದು ಎಂದು ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮನೆಗೆ 10 ಜನ ಅಧಿಕಾರಿಗಳು ಭೇಟಿ ನೀಡಿದ್ದರು.


ಕೆಲ ಸಮಯದ ಬಳಿಕ ಅಧಿಕಾರಿಗಳು ರೇವಣ್ಣರನ್ನು ಅರೆಸ್ಟ್​ ಮಾಡಿದ್ದಾರೆ.ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ


ಬೆಂಗಳೂರಿನ ಪದ್ಮನಾಭನಗರದಲ್ಲಿ ಇರುವ ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡ ನಿವಾಸದ ಒಳಗೆ ಅಧಿಕಾರಿಗಳನ್ನು ಬಿಟ್ಟಿಲ್ಲ. ಹೀಗಾಗಿ 10 SIT ಅಧಿಕಾರಿಗಳು ಬಾಗಿಲ ಬಳಿಯೇ ನಿಂತುಕೊಂಡಿದ್ದರು.

Share This Article
Leave a comment