ಚೆಕ್ ಬೌನ್ಸ್ ಪ್ರಕರಣ-ನಟಿ ಪದ್ಮಜಾ ರಾವ್ ಗೆ ಜಾಮೀನು ರಹಿತ ಬಂಧನದ ವಾರೆಂಟ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಸ್ಯಾಂಡಲ್ ವುಡ್ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಮಂಗಳವಾರ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ 40 ಲಕ್ಷ ರು. ಚೆಕ್ ಬೌನ್ಸ್ ಪ್ರಕರಣದಲ್ಲಿ ಮಂಗಳೂರಿನ ಜೆ.ಎಂ.ಎಫ್.ಸಿ ಐದನೇ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ವಾರಂಟ್‍ನ್ನು ಈಗಾಗಲೇ ತಲಘಟ್ಟಪುರ ಪೊಲೀಸ್ ಠಾಣೆಗೆ ರವಾನಿಸಲಾಗಿದೆ. ಪದ್ಮಜಾ ರಾವ್ ರವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಿದೆ.
ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್‍ನಿಂದ ಪದ್ಮಜಾ ರಾವ್ ಹಂತ ಹಂತವಾಗಿ ಸುಮಾರು 41 ಲಕ್ಷ ರು ಗಳನ್ನು ಬ್ಯಾಂಕ್ ಖಾತೆಯ ಮೂಲಕ ಸಾಲ ಪಡೆದುಕೊಂಡಿದ್ದರು.
ಈ ಸಾಲದ ಭದ್ರತೆಗಾಗಿ 40 ಲಕ್ಷ ರು ಗಳ ಚೆಕ್ ಅನ್ನು ನೀಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು