ರಾಮನಗರ : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ
- ಮೋಟರ್ ಸೈಕಲ್ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ)
- ತ್ರಿಚಕ್ರವಾಹನ (ಆಟೋ ರಿಕ್ಷಾ ಸೇರಿದಂತೆ) ಮೋಟಾರು ರಹಿತ ವಾಹನಗಳು
- ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೇಲ್ ಹೈಡ್ರಾಲಿಕ್ ವಾಹನಗಳು
- ಕ್ವಾಡ್ರಿ ಚಕ್ರ ವಾಹನಗಳು ವೇಗದ ಮಿತಿ 100 ಕಿಮೀ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಸಂಚರಿಸುವ ವಾನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್ ವೇಗದ ಮಿತಿ ನಿಗದಿಪಡಿಸಲಾಗಿದೆ. ಜಲಾಶಯಗಳ ನೀರಿನ ಮಟ್ಟ

2000ಕ್ಕೂ ಹೆಚ್ಚು ವಾಹನಗಳ ಮಾಲೀಕರ ವಿರುದ್ಧ ಪ್ರಕರಣ:
ಜುಲೈ ತಿಂಗಳಲ್ಲಿ 24 ರ ವರೆಗೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿವೇಗದ ಚಾಲನೆಗಾಗಿ (ಗಂಟೆಗೆ 100 ಕಿಮೀಗಿಂತ ಹೆಚ್ಚು ವೇಗದ ಚಾಲನೆ) 2,000 ಕ್ಕೂ ಹೆಚ್ಚು ವಾನಹಗಳ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಡಗಿನಲ್ಲಿ ಮಳೆ ಅಬ್ಬರ : ಮಂಗಳವಾರವೂ ಶಾಲಾ – ಕಾಲೇಜುಗಳಿಗೆ ರಜೆ
ಎಡಿಜಿಪಿ ಅಲೋಕ್ ಕುಮಾರ್ ನಾಳೆ (ಮಂಗಳವಾರ) ಮತ್ತೊಮ್ಮೆ ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ. ಅಲೋಕ್ ಕುಮಾರ್ ಬಿಡದಿಯಿಂದ ಮೈಸೂರುವರೆಗಿನ ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಲಿದ್ದಾರೆ