January 8, 2025

Newsnap Kannada

The World at your finger tips!

eshwar khandre karnataka minister

ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ

Spread the love

ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶವಿಲ್ಲ ಎಂಬುದನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಪುನರುಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಸ್ಪಷ್ಟಪಡಿಸಿದರು.

ಇತ್ತೀಚೆಗೆ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ, ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಪ್ರಿಯಾಂಕಾ ಗಾಂಧಿಯವರ ನಿಲುವಿಗೆ ಬೆಂಬಲ ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಖಂಡ್ರೆ, ಪ್ರಸ್ತುತ ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅವಕಾಶವಿದೆ. ಅದರ ಬಳಿಕ ಕೇವಲ 2 ಬಸ್‌ಗಳಿಗೆ ಮಾತ್ರ ಸಂಚಾರ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಆರೋಗ್ಯ ತುರ್ತು ಪರಿಸ್ಥಿತಿ ಅಥವಾ ಆಸ್ಪತ್ರೆಯ ಸೇವೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ, ವನ್ಯಜೀವಿ ಸಂರಕ್ಷಣೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನ ಸಂಚಾರಕ್ಕೆ ಅನುಮತಿಯಿಲ್ಲ. ರಾತ್ರಿ ಹೊತ್ತು ಸಂಚಾರಕ್ಕೆ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.ಇದನ್ನು ಓದಿ –ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ

ಈ ಕುರಿತು ನಮ್ಮ ನಾಯಕರಿಗೆ ಯಾವುದೇ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡಿಸುತ್ತೇನೆ ಎಂದು ಈಶ್ವರ್ ಖಂಡ್ರೆ ಹೇಳಿಕೆಯು ಗಮನ ಸೆಳೆದಿದೆ.

Copyright © All rights reserved Newsnap | Newsever by AF themes.
error: Content is protected !!