ರಾಯಚೂರು: ಇಂದು (ಅ.03) ಒಳಮೀಸಲಾತಿ ಹಕ್ಕುಗಳಿಗಾಗಿ ಪ್ರತಿಭಟನೆ ಕೈಗೊಳ್ಳಲು ರಾಯಚೂರು ಜಿಲ್ಲೆಯ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಒಕ್ಕೂಟದ ಮೂಲಕ ಆಯೋಜಿಸಿರುವ ಈ ಬಂದ್ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ
ನಗರದ ಅಂಗಡಿಗಳು, ತರಕಾರಿ ಮಾರುಕಟ್ಟೆ, ಹೋಟೆಲ್ ಮತ್ತು ಪೆಟ್ರೋಲ್ ಬಂಕ್‌ಗಳು ಸಂಪೂರ್ಣವಾಗಿ ಬಂದ್ ಆಗಿವೆ. ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿಗೆ ತರಲು ಅಧಿಕಾರ ನೀಡಿರುವುದರಿಂದ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಒಳಮೀಸಲಾತಿ ಜಾರಿಗೆ ತರುವ ಬಗ್ಗೆ ತೀವ್ರ ವಿರೋಧವನ್ನು ಎದುರಿಸುತ್ತಿದೆ. ಈ ಕಾರಣದಿಂದಾಗಿ, ಬಂದ್ ಘೋಷಣೆ ಮಾಡಲಾಗಿದೆ.
ಬೆಳಿಗ್ಗೆಯಿಂದ ಜಿಲ್ಲಾ ಮತ್ತು ಹೊರಜಿಲ್ಲೆಗಳ ನಡುವಿನ ಬಸ್ ಸೇವೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಬಂದ್ ಕಾರಣದಿಂದಾಗಿ ರಾಯಚೂರು ನಗರ ಬಹುತೇಕ ಸ್ಥಬ್ಧವಾಗಿದೆ.ಇದನ್ನು ಓದಿ –ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
ಕಳೆದ ಹಲವು ದಶಕಗಳಿಂದ ಒಳಮೀಸಲಾತಿ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದು ,ಸುಪ್ರೀಂಕೋರ್ಟ್ ನೀಡಿರುವ ಅಧಿಕಾರವನ್ನು ಸಿಎಂ ಸಿದ್ದರಾಮಯ್ಯ ಸರಿಯಾಗಿ ಬಳಸಿಕೊಂಡು ಹಿಂದುಳಿದ ವರ್ಗಗಳಿಗೆ ಅನುಕೂಲ ಕಲ್ಪಿಸುವುದು ಅವಶ್ಯಕವಾಗಿದೆ. ಅವರು ಇತ್ತೀಚೆಗೆ ನೀಡಿರುವ ಭರವಸೆಗಳನ್ನು ಉಳಿಸಿಕೊಳ್ಳಬೇಕು ಎಂದು ಹೋರಾಟಗಾರರು ಒತ್ತಿಸುತ್ತಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು