November 20, 2024

Newsnap Kannada

The World at your finger tips!

airport , inauguration , terminal

Bangalore Airport's New Terminal: Inaugurated by Prime Minister on 11th ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ : ನ11 ರಂದು ಪ್ರಧಾನಿಯಿಂದ ಉದ್ಘಾಟನೆ

ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ : ನ11 ರಂದು ಪ್ರಧಾನಿಯಿಂದ ಉದ್ಘಾಟನೆ

Spread the love

5 ಸಾವಿರ ಕೋಟಿ ರು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದ ನಿಲ್ದಾಣದ ಟರ್ಮಿನಲ್ -2 ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಲಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ಇಳಿಸಲು ಹೊಸ ಟರ್ಮಿನಲ್ ನಿರ್ಮಾಣ ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ.ಶಂಕರ್‌ನಾಗ್ ಸವಿನೆನಪು

ಟರ್ಮಿನಲ್ 2 ಉದ್ಘಾಟನೆಯಿಂದ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ ಮತ್ತು ಚೆಕ್-ಇನ್ ದ್ವಿಗುಣಗೊಳ್ಳುತ್ತವೆ ಇದು ಪ್ರಯಾಣಿಕರಿಗೆ ಸಹಾಯವಾಗಲಿದೆ.

ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಪ್ರಯಾಣಿಕರ ಅನುಭವವನ್ನು ಉದ್ಯಾನವನದಲ್ಲಿ ನಡಿಗೆ ಎಂದು ಅರ್ಥೈಸಲಾಗಿದೆ. ಪ್ರಯಾಣಿಕರು 10,000 ಚದರ ಮೀಟರ್ ಗಳಷ್ಟು ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸುತ್ತಾರೆ.

ಈ ಉದ್ಯಾನಗಳನ್ನು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತ (India) ದಲ್ಲಿ ನಿರ್ಮಿಸಿದೆ. ಈ ವಿಮಾನ ನಿಲ್ದಾಣವು ನವೀಕರಿಸಬಹುದಾದ ಶಕ್ತಿಯ ಶೇ 100 ರಷ್ಟು ಮಾಡಿಕೊಂಡಿದೆ. ಹೊಸ ಟರ್ಮಿನಲ್ ಫೋಟೋಗಳು ಬಿಡುಗಡೆಯಾಗಿವೆ.

Copyright © All rights reserved Newsnap | Newsever by AF themes.
error: Content is protected !!